
ಕಲಬುರಗಿ: ರಾಯಚೂರು ಜಿಲ್ಲೆಯ ವಕ್ರಾಣಿ, ವಿಜಯಪುರ ಜಿಲ್ಲೆಯ ಮುತ್ತಗಿಯಲ್ಲಿ ದಲಿತ ಸಮುದಾಯದ ಯುವತಿಯರ ಮೇಲಿನ ಲೈಂಗಿಕ ದೌರ್ಜನ್ಯ ಮತ್ತು ಕೊಲೆ, ರಾಯಚೂರು ಜಿಲ್ಲೆಯ ದಲಿತ ಸಮುದಾಯದ ಬುಮಾನಂದನ ಮತ್ತು ರಮೇಶ ನಕ್ಕುಂದಿ ಅವರ ಕೊಲೆ ಪ್ರಕರಣದ ಆರೋಪಿಗಳನ್ನು ಕಠಿಣ ಶಿಕ್ಷೆಗೆ ಗುರಿಪಡಿಸಬೇಕು ಮತ್ತು ನೊಂದ ಕುಟುಂಬಗಳಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ಮಾದಿಗ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ನಗರದಲ್ಲಿ ಇಂದು ಪ್ರತಿಭಟನೆ ನಡೆಸಲಾಯಿತು. ದಸಂಸ ರಾಜ್ಯ ಕಾರ್ಯಾಧ್ಯಕ್ಷ ದಶರಥ ಕಲಗುರ್ತಿ, ಮಾದರ ಚನ್ನಯ್ಯ ಸೇವಾ ಸಮಿತಿ ಜಿಲ್ಲಾ ಅಧ್ಯಕ್ಷ ಮಲ್ಲಿಕಾರ್ಜುನ ಜಿನಕೇರಿ, ರಾಜು ಕಟ್ಟಿಮನಿ, ರಮೇಶ ವಾಡೇಕರ್, ರಂಜಿತಕುಮಾರ ಮೂಲಿಮನಿ, ಬಂಡೇಶ ರತ್ನಡಗಿ ಸೇರಿದಂತೆ ಮತ್ತಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.





























