
ಕಲಬುರಗಿ: ನಗರದ ಶರಣಬಸವೇಶ್ವರ ದೇವಸ್ಥಾನ ಆವರಣದ ಅನುಭವಮಂಟಪದಲ್ಲಿಂದು ಶರಣಬಸವೇಶ್ವರ ಸಂಸ್ಥಾನದ 8 ನೇ ಮಹಾದಾಸೋಹ ಪೀಠಾಧಿಪತಿ ವಿದ್ಯಾಭಂಡಾರಿ.ಲಿಂ.ಪರಮಪೂಜ್ಯ ಡಾ.ಶರಣಬಸವಪ್ಪ ಅಪ್ಪ ಅವರ ಪ್ರಥಮ ಪುಣ್ಯಸ್ಮರಣೋತ್ಸವ ಜರುಗಿತು.ಸಂಸ್ಥಾನದ 9 ನೇ ಪೀಠಾಧಿಪತಿ ಪೂಜ್ಯ ದೊಡ್ಡಪ್ಪ ಎಸ್ ಅಪ್ಪ,ಶರಣಬಸವ ವಿವಿ ಕುಲಾಧಿಪತಿ ಮಾತೋಶ್ರೀ ಡಾ.ದಾಕ್ಷಾಯಿಣಿ ಎಸ್ ಅಪ್ಪ,ಪೂಜ್ಯರಾದ ಡಾ. ಚನ್ನವೀರ ಶಿವಾಚಾರ್ಯರು, ಜಗದ್ಗುರು ಡಾ.ಸಾರಂಗಧರ ದೇಶಿಕೇಂದ್ರ ಮಹಾಸ್ವಾಮಿಗಳು,ಡಾ.ಗುರುಪಾದಲಿಂಗ ಶಿವಯೋಗಿಗಳು,ಸಂಸದರಾದ ಪ್ರಭಾ ಮಲ್ಲಿಕಾರ್ಜುನ,ರಾಧಾಕೃಷ್ಣ ದೊಡ್ಡಮನಿ,ಸಚಿವ ಡಾ.ಶರಣಪ್ರಕಾಶ ಪಾಟೀಲ ಸೇರಿದಂತೆ ಶಾಸಕರು, ಗಣ್ಯರು ಉಪಸ್ಥಿತರಿದ್ದರು.






























