ಕಲಬುರಗಿ: ನಗರದ ಸೂಪರ್ ಮಾರ್ಕೆಟ್,ಸರಾಫ್ ಬಜಾರ್ ಮತ್ತು ಚಪ್ಪಲ್ ಬಜಾರ್ ನಲ್ಲಿ ಸಂಚಾರ ವ್ಯವಸ್ಥೆ ಹದಗೆಟ್ಟಿದ್ದು,ರಸ್ತೆಯನ್ನು ಅತಿಕ್ರಮಣ ಮಾಡಿಕೊಂಡು ವ್ಯಾಪಾರ ಮಾಡುತ್ತಿರುವ ಗೂಡಂಗಡಿ ಮತ್ತು ತಳ್ಳುಗಾಡಿಗಳನ್ನು ತೆರವುಗೊಳಿಸುವಂತೆ ಆಗ್ರಹಿಸಿ ಇಂದು ಕಲ್ಯಾಣ ಕರ್ನಾಟಕ ರಕ್ಷಣಾ ವೇದಿಕೆ ಸಂಘಟನೆಯಿಂದ ಮಾರುಕಟ್ಟೆ ನಡುರಸ್ತೆಯಲ್ಲಿ ಪ್ರತಿಭಟನಾ ಧರಣಿ ನಡೆಸಲಾಯಿತು.ರಾಜ್ಯಾಧ್ಯಕ್ಷ ಶಿವಲಿಂಗ ಹಳಿಮನಿ,ಜಿಲ್ಲಾಧ್ಯಕ್ಷ ಸಂದೀಪ ಭರಣಿ,ಸತೀಶ ಕಡೂನ್,ನಾಗು ಪಾಟೀಲ್,ಸಗರ್ ನೆಲೋಗಿ,ಅಂಕುಶ ನಂದೂರ್,ರಾಮಣ್ಣ ನಾಯಿಕೋಡಿ ಸೇರಿದಂತೆ ಹಲವರು ಪಾಲ್ಗೊಂಡರು.