ಅಮೆರಿಕದ ನ್ಯೂಜೆರ್ಸಿಯ ಸೋಮರ್ಸೆಟ್‌ನಲ್ಲಿರುವ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಶಾಖಾ ಮಠಕ್ಕೆ ಮಾಜಿ ಮುಖ್ಯಮಂತ್ರಿಗಳು ಹಾಗೂ ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿಯವರು ಭೇಟಿ ನೀಡಿ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿಗಳವರಿಂದ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ೨೦ ಎಕರೆ ಪ್ರದೇಶದಲ್ಲಿ ನಿರ್ಮಾಣವಾಗುತ್ತಿರುವ ಶ್ರೀ ಕಾಲಭೈರವೇಶ್ವರ ಸ್ವಾಮಿ ದೇವಸ್ಥಾನದ ನಿರ್ಮಾಣ ಕಾಮಗಾರಿಯನ್ನು ವೀಕ್ಷಿಸಿದರು. ಶ್ರೀ ಮಠದ ಭಕ್ತರು ಹಾಗೂ ಗಣ್ಯರು ಉಪಸ್ಥಿತರಿದ್ದರು.