ಕಲಬುರಗಿ: ಕಲಬುರಗಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸುವಂತೆ ಆಗ್ರಹಿಸಿ ಇಂದು ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಸಮಿತಿಯಿಂದ ಪ್ರತಿಭಟನೆ ನಡೆಸಿ ಜಿಲ್ಲಾಡಳಿತದ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು.ಜಿಲ್ಲಾಧ್ಯಕ್ಷ ಆನಂದ ದೊಡ್ಡಮನಿ,ಪ್ರವೀಣ ಕಟ್ಟಿಮನಿ,ಮಹೇಶ ಕಾಶಿ,ಶಂಭುಲಿಂಗ ಕುಲಕರ್ಣಿ,ವೆಂಕಟೇಶ ರಾಠೋಡ ಅವರು ಸೇರಿದಂತೆ ಹಲವರು ಪಾಲ್ಗೊಂಡರು.