ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದಲ್ಲಿ ದಶಕಗಳಿಂದ ಖಾಲಿ ಇರುವ 30 ಸಾವಿರ ಶಿಕ್ಷಕರ ಹುದ್ದೆಗಳನ್ನು ಮತ್ತು ಇತರೆ ಇಲಾಖೆಯಲ್ಲಿ ಖಾಲಿ ಇರುವ ಎಲ್ಲಾ ಹುದ್ದೆಗಳನ್ನು ಭರ್ತಿ ಮಾಡಬೇಕು ಎಂಬ ಬೇಡಿಕೆ ಸೇರಿದಂತೆ ವಿವಿಧ ಬೇಡಿಕೆಳ ಈಡೇರಿಕೆಗೆ ಆಗ್ರಹಿಸಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಹೋರಾಟ ಸಮಿತಿ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಇಂದು ಪ್ರತಿಭಟನೆ ನಡೆಸಲಾಯಿತು. ಕೆ.ನೀಲಾ, ಅರ್ಜುನ ಭದ್ರೆ, ನಾಗೇಂದ್ರ ಥಂಬೆ, ರಮೇಶ ರಾಗಿ, ಮರೆಪ್ಪ ಹಳ್ಳಿ, ಶಶಿಕಲಾ ಪಾಟೀಲ, ಮಂಜುಳಾ ಭಜಂತ್ರಿ, ಪಾಂಡುರಂಗ ಮಾವಿನಕರ್, ಮಲ್ಲಿಕಾರ್ಜುನ ಕ್ರಾಂತಿ ಸೇರಿದಂತೆ ಮತ್ತಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.