
ಕಲಬುರಗಿ: ಜಿಲ್ಲಾಡಳಿತ, ಜಿ.ಪಂ.,ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ನಗರದ ಚಂದ್ರಶೇಖರ್ ಪಾಟೀಲ ಕ್ರೀಡಾಂಗಣದಲ್ಲಿಂದು ಹಮ್ಮಿಕೊಂಡಿದ್ದ ಕಲಬುರಗಿ ತಾಲೂಕಾ ಮಟ್ಟದ ದಸರಾ ಕ್ರೀಡಾಕೂಟವನ್ನು ಶಾಸಕ ಅಲ್ಲಮಪ್ರಭು ಪಾಟೀಲ ಉದ್ಘಾಟಿಸಿದರು. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಅಮೃತ ಎನ್.ಅಷ್ಟಗಿ ಸೇರಿದಂತೆ ಮತ್ತಿತರರು ಇದ್ದರು.






























