
ಕಲಬುರಗಿ: ಯಾನಾಗುಂದಿ ಬೆಟ್ಟದಲ್ಲಿ ಅಕ್ರಮವಾಗಿ ಕೋಟಿಲಿಂಗ ಸ್ಥಾಪನೆಯ ಯೋಜನೆಯನ್ನು ತಕ್ಷಣವೇ ನಿಲ್ಲಿಸಬೇಕು ಮತ್ತು ಮಾತೆ ಮಾಣಿಕೇಶ್ವರಿ ಟ್ರಸ್ಟ್ ಅಧ್ಯಕ್ಷ ಶಿವಯ್ಯ, ಕಾರ್ಯದರ್ಶಿ ನಟ್ಟಂ ಸುಮನ್ ಮತ್ತು ಇತರರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ವಿವಿಧ ಮಠಾಧೀಶರು ಸೇರಿದಂತೆ ಹಲವರು ನಗರದ ಸರ್ದಾರ ವಲ್ಲಭಭಾಯಿ ಪಟೇಲ್ ವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿಯವರೆಗೆ ಇಂದು ಪ್ರತಿಭಟನೆ ನಡೆಸಿದರು.






























