ಕಲಬುರಗಿ: ಗುಲಬರ್ಗಾ ವಿಶ್ವವಿದ್ಯಾಲಯದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಇಂದು ಆಯೋಜಿಸಿದ್ದ ಗುವಿಯ 47ನೇ ಸಂಸ್ಥಾಪನಾ ದಿನಾಚರಣೆಯನ್ನು ಸಂಸದ ರಾಧಾಕೃಷ್ಣ ದೊಡ್ಡಮನಿ ಉದ್ಘಾಟಿಸಿದರು. ಕುಲಪತಿ ಪ್ರೊ.ಶಶಿಕಾಂತ ಎಸ್.ಉಡಿಕೇರಿ, ಕುಲ ಸಚಿವ ಪ್ರೊ.ರಮೇಶ ಲಂಡಕನರ್, ಸಿಂಡಿಕೇಟ್ ಸದಸ್ಯ ಉದಯಕುಮಾರ ಪಾಟೀಲ, ವಿದ್ಯಾವಿಷಯಕ ಪರಿಷತ್ ಸದಸ್ಯ ಪ್ರೊ.ಹೂವಿನಭಾವಿ ಬಾಬಣ್ಣ, ಮೌಲ್ಯಮಾಪನ ಕುಲಸಚಿವ ಡಾ.ಎನ್.ಜಿ.ಕಣ್ಣೂರು, ವಿತ್ತಾಧಿಕಾರಿ ಜಯಾಂಬಿಕ ಇದ್ದರು.