ಕಲಬುರಗಿ: ಕಲ್ಯಾಣ ಕರ್ನಾಟಕ ಉತ್ಸವಕ್ಕೆ ಆಗಮಿಸುತ್ತಿರುವ ಮುಖ್ಯಮಂತ್ರಿಗಳು ಕಲ್ಯಾಣ ಕರ್ನಾಟಕ ಮತ್ತು ಕಲಬುರಗಿ ಜಿಲ್ಲೆಯ ವಿವಿಧ ಬೇಡಿಕೆಗಳನ್ನು ಘೋಷಿಸುವಂತೆ ಆಗ್ರಹಿಸಿ ಇಂದು ಕಲ್ಯಾಣನಾಡು ವಿಕಾಸ ವೇದಿಕೆಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.ಸಂಸ್ಥಾಪಕ ಅಧ್ಯಕ್ಷ ಮುತ್ತಣ್ಣ ನಡಗೇರಿ, ಜಿಲ್ಲಾಧ್ಯಕ್ಷ ಬಾಬು ಮದನಕರ್ ,ಜೈಭೀಮ ಮಾಳಗೆ,ಮೋಹನ ಸಾಗರ ಸೇರಿದಂತೆ ಹಲವರು ಪಾಲ್ಗೊಂಡರು.