
ಕಲಬುರಗಿ: ನಗರದ ಚಂದ್ರಶೇಖರ ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿಂದು ಹಮ್ಮಿಕೊಂಡ ಕಲಬುರಗಿ ಜಿಲ್ಲಾಮಟ್ಟದ ದಸರಾ ಕ್ರೀಡಾಕೂಟವನ್ನು ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ ಅವರು ಉದ್ಘಾಟಿಸಿ ಧ್ವಜಾರೋಹಣ ಮಾಡಿದರು.ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ರಾಜಶೇಖರ ಗೋನಾಯಕ ಕ್ರೀಡಾಜ್ಯೋತಿ ಸ್ವೀಕರಿಸಿದರು.ಭೋಜನಗೌಡ ಪಾಟೀಲ,ಸಂಜಯ ಬಾಣದ,ಪ್ರವೀಣಪುಣೆ,ರಾಜು ಚವ್ಹಾಣ ಸೇರಿದಂತೆ ಹಲವರು ಉಪಸ್ಥಿತರಿದ್ದರು.


























