
ಕಲಬುರಗಿ: ಕಲ್ಯಾಣ ಕರ್ನಾಟಕದ ಏಳು ಜಿಲ್ಲೆಗಳನ್ನು ಬರಗಾಲಪೀಡಿತ ಪ್ರದೇಶ ಘೋಷಿಸುವದು ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಇಂದು ಕರ್ನಾಟಕ ರಕ್ಷಣಾ ವೇದಿಕೆ ಉತ್ತರ ಕರ್ನಾಟಕ ವತಿಯಿಂದ “ನಮ್ಮ ನಡೆ ಕಲ್ಯಾಣ ಕಲಬುರಗಿ ಕಡೆ” ಅಭಿಯಾನ ಕಲಬುರಗಿ ಕೇಂದ್ರ ಬಸ್ ನಿಲ್ದಾಣದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಬೃಹತ್ ಪಾದಯಾತ್ರೆ ನಡೆಸಿ, ಜಿಲ್ಲಾಡಳಿತದ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು.ರಾಜ್ಯ ಅಧ್ಯಕ್ಷ ಪ್ರವೀಣಕುಮಾರ ಶೆಟ್ಟಿ,ಉತ್ತರ ಕರ್ನಾಟಕ ಅಧ್ಯಕ್ಷ ಶರಣು ಬಿ ಗದ್ದುಗೆ,ಕ.ಕ ಅಧ್ಯಕ್ಷ ಅಭಿಷೇಕ ಬಾಲಾಜಿ ಸೇರಿದಂತೆ ಹಲವರು ಪಾಲ್ಗೊಂಡರು.


























