
ಕಲಬುರಗಿ: ಜಿಲ್ಲೆಯಲ್ಲಿ ಗುಣಮಟ್ಟದ ಶಿಕ್ಷಣ,ವಿದ್ಯಾರ್ಥಿಗಳ ಕಲ್ಯಾಣ ಮತ್ತು ಸುರಕ್ಷತೆಗೆ ಆಗ್ರಹಿಸಿ ಇಂದು ಇತ್ತೆಹಾದ-ಎ-ಮಿಲ್ಲತ್ ಅಸೋಸಿಯೇಷನ್ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಜಿಲ್ಲಾಡಳಿತದ ಮೂಲಕ ಶಿಕ್ಷಣ ಸಚಿವರಿಗೆ ಮನವಿ ಸಲ್ಲಿಸಲಾಯಿತು.ಮೊಹಮ್ಮದ್ ಶಾಹೀದ್ ಅಹಮದ್ ಸಿದ್ದಿಖಿ ಅವರು ಸೇರಿದಂತೆ ಅನೇಕರು ಪಾಲ್ಗೊಂಡರು.





















