
ಕಲಬುರಗಿ: ಜಿಲ್ಲೆಯಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ವಸತಿ ನಿಲಯಗಳಲ್ಲಿ ದುಡಿಯುತ್ತಿರುವ ಹೊರಗುತ್ತಿಗೆ ನೌಕರರನ್ನು ಕೆಲಸದಿಂದ ತೆಗೆಯಲಾಗಿದ್ದು, ಪುನ: ಅವರನ್ನು ಸೇವೆಯಲ್ಲಿ ಮುಂದುವರಿಸಬೇಕು, ಬಾಕಿ ವೇತನ ಪಾವತಿಸಬೇಕು ಮತ್ತು ತಾತ್ಕಾಲಿಕ ನೇಮಕಾತಿ ಆದೇಶ ನೀಡಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಸರಕಾರಿ ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಸಂಘದ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಸಮಾಜ ಕಲ್ಯಾಣ ಇಲಾಖೆ ಎದುರುಗಡೆ ಇಂದು ಧರಣಿ ಸತ್ಯಾಗ್ರಹ ನಡೆಸಲಾಯಿತು. ಸಂಘದ ರಾಜ್ಯ ಅಧ್ಯಕ್ಷ ಭೀಮಶೆಟ್ಟಿ ಯಂಪಳ್ಳಿ, ಜಿಲ್ಲಾ ಕಾರ್ಯದರ್ಶಿ ಮಮ್ಮದ್ ಜಮೀರೋದ್ದಿನ್ ಬಾಬಾ, ಜಿಲ್ಲಾ ಅಧ್ಯಕ್ಷ ಪರಶುರಾಮ ಹಡಲಗಿ, ಮೇಘರಾಜ ಕಠಾರೆ, ಅಲ್ಲಾ ಪಟೇಲ್ ವಾಡಿ, ನಾಗರಾಜ ಕಟ್ಟಿಮನಿ, ನಾಗರತ್ನ ಮದನಕರ, ಮಲ್ಲಮ್ಮ ಕೋಡ್ಲಿ ಸೇರಿದಂತೆ ಮತ್ತಿತರರು ಸತ್ಯಾಗ್ರಹದಲ್ಲಿ ಭಾಗವಹಿಸಿದ್ದರು.






















