
ಕಲಬುರಗಿ: ಕನಿಷ್ಟ ವೇತನ ಜಾರಿ ಮಾಡುವದು,ಬಾಕಿ ವೇತನ ಪಾವತಿಸುವದು ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಇಂದು ಕರ್ನಾಟಕ ರಾಜ್ಯ ಸರಕಾರಿ ಹಾಸ್ಟೆಲ್ ಮತ್ತು ವಸತಿಶಾಲಾ ಹೊರಗುತ್ತಿಗೆ ನೌಕರರ ಸಂಘ ಜಿಲ್ಲಾ ಸಮಿತಿಯಿಂದÀ ಸಮಾಜ ಕಲ್ಯಾಣ ಇಲಾಖೆ ಕಚೇರಿ ಮುಂದೆ ಧರಣಿ ನಡೆಸಲಾಯಿತು. ರಾಜ್ಯಾಧ್ಯಕ್ಷ ಭೀಮಶೆಟ್ಟಿ ಯಂಪಳ್ಳಿ,ಕೆ.ಹಣುಮೇಗೌಡ,ಮೊಹಮ್ಮದ ಜಮೀರೋದ್ದಿನ್ ಬಾಬಾ,ಹುಲಗಪ್ಪ ಚಲವಾದಿ ಸೇರಿದಂತೆ ಹಲವರು ಪಾಲ್ಗೊಂಡರು.





















