ಹೆಬ್ಬಾಳದಲ್ಲಿರುವ ಸುಮಂಗಲಿ ಸೇವಾ ಆಶ್ರಮದಲ್ಲಿ ಇಂದು ನಡೆದ ಸಮಾರಂಭದಲ್ಲಿ ಆಶ್ರಮದ ಸಲಹೆಗಾರರಾದ ಶ್ರೀಮತಿ ಎನ್. ಶ್ರೀದೇವಿ ಅವರು ರಚಿಸಿರುವ ವಿಶ್ಪರ್ಸ್ ಆಫ್ ವಿಸ್ಡಮ್ ಮತ್ತು ಟಾಯ್ಸ್ & ಗೇಮ್ಸ್ ಎಂಬ ಎರಡು ಕೃತಿಗಳನ್ನು ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್, ಸಾರಿಗೆ ಸಚಿವ ಬೈರತಿ ಸುರೇಶ್, ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಮತ್ತು ಸುಮಂಗಲಿ ಸೇವಾ ಆಶ್ರಮದ ಸಂಸ್ಥಾಪಕರಾದ ಪದ್ಮಶ್ರೀ ಡಾ. ಎಸ್. ಜಿ. ಸುಶೀಲಮ್ಮ ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಮಾಜಿ ಸಚಿವರಾದ ರಾಣಿ ಸತೀಶ್, ನಿವೃತ್ತ ಐಎಎಸ್ ಅಧಿಕಾರಿ ಡಾ. ಸೋಮಶೇಖರ್ ಸೇರಿದಂತೆ ಅನೇಕ ಗಣ್ಯರು ಪಾಲ್ಗೊಂಡಿದ್ದರು.