ಕಲಬುರಗಿ: ವಿಕಲಚೇತನರ ಗೌರವಧನ ಕಾರ್ಯಕರ್ತರ ಸಂಘದ ಅಧ್ಯಕ್ಷ ಅಂಬಾಜಿ ಪಿ.ಮೇಟಿಯನ್ನು ಜಿಲ್ಲೆಯಿಂದ ಗಡಿಪಾರು ಮಾಡುವಂತೆ ಆಗ್ರಹಿಸಿ ಜಿಲ್ಲಾ ಮಾದಿಗ ಸಮಾಜದ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ನಗರದ ಜಗತ್ ವೃತ್ತದಲ್ಲಿ ಇಂದು ಪ್ರತಿಭಟನೆ ನಡೆಸಲಾಯಿತು. ದಶರಥ ಕಲಗುರ್ತಿ, ಮಲ್ಲಿಕಾರ್ಜುನ ಜಿನಕೇರಿ, ಶ್ರೀಮಂತ ಭಂಡಾರಿ, ಮಾರುತಿ ಮುಗಟಿ, ಪರಶುರಾಮ, ರವಿ ಬೆಳಮಗಿ ಸೇರಿದಂತೆ ಮತ್ತಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.