
ಕಲಬುರಗಿ: ಜಿಲ್ಲೆಯಲ್ಲಿ ಅನಾವೃಷ್ಟಿಯಿಂದ ಬೆಳೆ ಹಾನಿಯಾಗಿದ್ದು, 100ಕ್ಕೆ 100 ರಷ್ಟು ಬೆಳೆನಷ್ಟ ವಿಮೆ ಹಣ ಮಂಜೂರು ಮಾಡಬೇಕು, ತೊಗರಿ ಮತ್ತು ಹತ್ತಿ ಬೆಳೆಗಾರರ ಸಂರಕ್ಷಣೆಗೆ ಬೆಂಬಲ ಬೆಲೆ (ಎಂಎಸ್ಪಿ) ಜಾರಿಗೆ ತರಬೇಕು, ಪಂಪಸೆಟ್ ರೈತರಿಗೆ ಹಗಲು ಹೊತ್ತಿನಲ್ಲಿ ತ್ರೀಫೇಸ್ ವಿದ್ಯುತ್ ನೀಡಬೇಕು ಎಂದು ಆಗ್ರಹಿಸಿ ಕರ್ನಾಟಕ ಪ್ರಾಂತ ರೈತ ಸಂಘದ ನೇತೃತ್ವದಲ್ಲಿ ರೈತರು ಮಾಡಬೂಳ ಟೋಲ್ನಾಕಾ ಬಂದ್ ಮಾಡಿ ಇಂದು ಪ್ರತಿಭಟನೆ ನಡೆಸಿದರು. ಶರಣಬಸಪ್ಪ ಮಮಶೆಟ್ಟಿ, ವೀರಣ್ಣಾ ಮಂಗಾಣಿ, ಕರೆಪ್ಪ ಕರಗೊಂಡ, ಸಿದ್ದು ಎಸ್.ಎಲ್. ಸೇರಿದಂತೆ ಮತ್ತಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.






















