ಕಲಬುರಗಿ: ವಿಧಾನ ಪರಿಷತ್‍ನ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯ ಮತ ಎಣಿಕೆ ಕಾರ್ಯ ಇಂದು ಬೆಳಿಗ್ಗೆ ಗುಲಬರ್ಗ ವಿಶ್ವವಿದ್ಯಾಲಯದ ಗಣಿತ ವಿಭಾಗದ ಭಾಸ್ಕರ ಸಭಾಂಗಣದಲ್ಲಿ ಪ್ರಾರಂಭವಾಯಿತು.ಈಸಂದರ್ಭದಲ್ಲಿ ಪ್ರಾದೇಶಿಕ ಆಯುಕ್ತರಾದ ಜಹೀರಾ ನಸೀಮ್, ಜಿಲ್ಲಾಧಿಕಾರಿ ಇಕ್ರಂ ಶರೀಫ್, ನಗರ ಪೊಲೀಸ್ ಆಯುಕ್ತ ಡಾ.ಶರಣಪ್ಪ ಎಸ್ ಡಿ ಅವರು ಸೇರಿದಂತೆ ಉನ್ನತ ಅಧಿಕಾರಿಗಳು ಉಪಸ್ಥಿತರಿದ್ದರು.