ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆಗೆ ಸಂಬAಧಿಸಿದAತೆ ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರಗಳಲ್ಲಿ ಕರಡು ಮತದಾರರ ಪಟ್ಟಿಯನ್ನು ಎಲ್ಲ ರಾಜಕೀಯ ಪಕ್ಷಗಳ ಮುಖಂಡರುಗಳಿಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಸ್ನೇಹಲ್ ಆರ್. ಅವರು ಪ್ರಚುರಪಡಿಸಿದರು. ಈ ಸಂದರ್ಭದಲ್ಲಿ ಉಪವಿಭಾಗಾಧಿಕಾರಿ ಪ್ರಭಾವತಿ ಫಕೀರಪುರ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಆಯುಕ್ತ ಡಾ. ರುದ್ರೇಶ ಘಾಳಿ, ಜಿಲ್ಲಾ ಪಂಚಾಯತ ಉಪಕಾರ್ಯದರ್ಶಿ ಮಲ್ಲಿಕಾರ್ಜುನ ತೊದಲಬಾಗಿ ಸೇರಿದಂತೆ ಕಾಂಗ್ರೇಸ್ ಪಕ್ಷದ ಮುಖಂಡ ಪ್ರಕಾಶ ಹಳಿಯಾಳ, ಭಾರತೀಯ ಜನತಾ ಪಕ್ಷದ ಮುಖಂಡ ಆರ್.ಎಮ್.ಕಲ್ಯಾಣಶೆಟ್ಟರ್, ಜನತಾ ಪಕ್ಷ ಮಂಜುನಾಥ ಹಗೆದಾರ, ಆಮ್ ಆದ್ಮಿ ಪಕ್ಷದ ಹುಸೇನಸಾಬ ತಲವಾಡ್ ಹಾಗೂ ಶ್ರೀಶೈಲಗೌಡ ಕಮತರ ಸೇರಿದಂತೆ ವಿವಿಧ ರಾಜಕೀಯ ಪಕ್ಷದ ಮುಖಂಡರು ಉಪಸ್ಥಿತರಿದ್ದರು.