
ಕಲಬುರಗಿ: ಕೆಲಸದಿಂದ ತೆಗೆದು ಹಾಕಿದ ಹಾಸ್ಟೆಲ್ ಹೊರಗುತ್ತಿಗೆ ನೌಕರರಿಗೆ ಪುನಃ ಸೇವೆಯಲ್ಲಿ ಮುಂದುವರೆಸುವಂತೆ ಆಗ್ರಹಿಸಿ ಇಂದು ಕರ್ನಾಟಕ ರಾಜ್ಯ ಸರಕಾರಿ ಹಾಸ್ಟೆಲ್ ಮತ್ತು ವಸತಿಶಾಲಾ ಹೊರಗುತ್ತಿಗೆ ನೌಕರರ ಸಂಘ ಜಿಲ್ಲಾ ಸಮಿತಿಯಿಂದ ಸಮಾಜ ಕಲ್ಯಾಣ ಇಲಾಖೆ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.ರಾಜ್ಯಾಧ್ಯಕ್ಷ ಭೀಮಶೆಟ್ಟಿ ಯಂಪಳ್ಳಿ,ಜಿಲ್ಲಾಧ್ಯಕ್ಷ ಪರಶುರಾಮ ಹಡಲಗಿ,ಮೇಘರಾಜ ಕಠಾರೆ,ನಾಗರತ್ನ ಮದನಕರ್,ಕಾಶೀನಾಥ ಬಂಡಿ ಸೇರಿದಂತೆ ಹಲವರು ಪಾಲ್ಗೊಂಡರು.























