
ಶಾಸಕ, ಕರ್ನಾಟಕ ಗೃಹ ಮಂಡಳಿ ಅಧ್ಯಕ್ಷ ಶ್ರೀನಿವಾಸ ಮಾನೆ ಹಾನಗಲ್ನ ಪ್ರವಾಸಿ ಮಂದಿರದಲ್ಲಿ ಜನತಾ ದರ್ಶನ ನಡೆಸಿ ಸಾರ್ವಜನಿಕರ ಅಹವಾಲು ಸ್ವೀಕರಿಸಿದರು. ತಾಲೂಕಿನ ವಿವಿಧ ಗ್ರಾಮಗಳಿಂದ ಆಗಮಿಸಿದ್ದ ಸಾರ್ವಜನಿಕರು ತಮ್ಮ ವೈಯಕ್ತಿಕ ಹಾಗೂ ಗ್ರಾಮದಲ್ಲಿನ ಸಾರ್ವಜನಿಕ ಸಮಸ್ಯೆಗಳನ್ನು ಗಮನಕ್ಕೆ ತಂದರು. ಕಂದಾಯ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್, ಹೆಸ್ಕಾಂ ಹೀಗೆ ವಿವಿಧ ಇಲಾಖೆಗಳ ಸಮಸ್ಯೆಗಳ ಕುರಿತು ಅಗತ್ಯ ಕ್ರಮಕ್ಕೆ ಶಾಸಕ ಮಾನೆ ಸಂಬAಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
























