
ಕಲಬುರಗಿ: ರಾಜ್ಯ ಸರ್ಕಾರದ ಜನ ವಿರೋಧಿ ನೀತಿ ಖಂಡಿಸಿ, ಹಾಲಿನ ದರ, ಬಸ್ ಪ್ರಯಾಣ ದರ ಏರಿಕೆ ವಿರೋಧಿಸಿ ಮತ್ತು ಸರಕಾರಿ ಶಾಲೆಗಳನ್ನು ಖಾಸಗಿ ದತ್ತು ವಿರೋಧಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾಕ್ರ್ಸ್ವಾದಿ) ಜಿಲ್ಲಾ ಸಮಿತಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಇಂದು ಪ್ರತಿಭಟನೆ ನಡೆಸಲಾಯಿತು. ಪಕ್ಷದ ಜಿಲ್ಲಾ ಕಾರ್ಯದರ್ಶಿ ಕೆ.ನೀಲಾ, ಭೀಮಶೆಟ್ಟಿ ಯಂಪಳ್ಳಿ, ಸುಧಾಮ ಧನ್ನಿ, ಶ್ರೀಮಂತ ಬಿರಾದಾರ, ಶಾಂತಾ ಘಂಟಿ, ಗುರು ಚಾಂದ ಕವಟೆ, ನಾಗಪ್ಪ ರಾಯಚೂರಕರ್, ಲವಿತ್ರಾ, ಶಿವಕುಮಾರ ಸೇರಿದಂತೆ ಮತ್ತಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.



















