
ನಗರದ ವೀರಾಪೂರ ಓಣಿಯಲ್ಲಿ ಜರುಗಿದ ಶ್ರೀ ಗ್ರಾಮದೇವತೆಗಳಾದ ಶ್ರೀ ದ್ಯಾಮಮ್ಮ ದೇವಿ ಹಾಗೂ ಶ್ರೀ ದುರ್ಗಮ್ಮ ದೇವಿಯ ಪ್ರಾಣಪ್ರತಿಷ್ಠಾಪನೆ ಮಹೋತ್ಸವ ಮತ್ತು ಜನಜಾಗೃತಿ ಧರ್ಮಸಭೆಯ ಉದ್ಘಾಟನಾ ಸಮಾರಂಭದಲ್ಲಿ ಸಮಾಜಸೇವಕರಾದ ಡಾ. ರಮೇಶ್ ಮಹಾದೇವಪ್ಪನವರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಸಾನಿಧ್ಯವನ್ನು ಪೂಜ್ಯ ಶ್ರೀ ರಾಯಚೂಟೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು ಹಾಗೂ ಪೂಜ್ಯ ಶ್ರೀ ಸಿದ್ದಲಿಂಗೇಶ್ವರ ಮಹಾಸ್ವಾಮಿಗಳು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಶಾಸಕರಾದ ಪ್ರಸಾದ ಅಬ್ಬಯ್ಯ, ಈರಣ್ಣ ಶಿಂತ್ರಿ, ಶ್ರೀಮತಿ ಮಂಗಳಮ್ಮ ಗೌರಿ, ಶ್ರೀಮತಿ ಸರೋಜಾ ಹೂಗಾರ, ಚೇತನ್ ಬಿಜವಾಡ ಸೇರಿದಂತೆ ಅನೇಕ ಗಣ್ಯರು, ಸಮಾಜದ ಮುಖಂಡರು ಉಪಸ್ಥಿತರಿದ್ದರು.




















