ರಾಜ್ಯ ಸರ್ಕಾರದ ಬೆಲೆ ಏರಿಕೆ ಹಾಗೂ ರೈತರಿಗೆ ಬರಗಾಲದ ಯವುದೇ ಪರಿಹಾರ ನೀಡದಿರುವುದನ್ನು ಖಂಡಿಸಿ ಹುಬ್ಬಳ್ಳಿ ಧಾರವಾಡ ಬಿಜೆಪಿ ಪೂರ್ವ ವಿಧಾನಸಭಾ ಕ್ಷೇತ್ರದ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು. ಈ ವೇಳೆ ಎಂಎಲ್ಸಿ ಪ್ರದೀಪ್ ಶೆಟ್ಟರ್, ಲಿಂಗರಾಜ ಪಾಟೀಲ್, ಕ್ಷೇತ್ರದ ಅಧ್ಯಕ್ಷರಾದ ಮಂಜುನಾಥ ಕಾಟಕಾರ, ಪಾಲಿಕೆ ಸದಸ್ಯ ಶಿವು ಮೆಣಸಿನಕಾಯಿ, ಮುಖಂಡರಾದ ಜಯತೀರ್ಥ ಕಟ್ಟಿ, ಅನೂಪ ಬಿಜವಾಡ, ವೆಂಕಟೇಶ ಕಾಟವೆ ಸೇರಿದಂತೆ ಕಾರ್ಯಕರ್ತರು ಹಾಗೂ ಮಹಿಳಾ ಕಾರ್ಯಕರ್ತೆಯರು ಇದ್ದರು.