
ಕಲಬುರಗಿ; ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ನೂತನ ಅಧ್ಯಕ್ಷರಾಗಿ ರಾಯಚೂರು ಗ್ರಾಮೀಣ ಶಾಸಕ ಬಸನಗೌಡ ದದ್ದಲ್ ಅವರು ಇಂದು ಪದಗ್ರಹಣ ಮಾಡಿದರು. ಗೃಹ, ಐ.ಟಿ.ಬಿ.ಟಿ., ಇ-ಆಡಳಿತ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ, ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ, ಸಚಿವ ಈಶ್ವರ ಖಂಡ್ರೆ, ಶಾಸಕ ಅಲ್ಲಮಪ್ರಭು ಪಾಟೀಲ, ವಿಧಾನ ಪರಿಷತ್ ಸದಸ್ಯ ತಿಪ್ಪಣ್ಣಪ್ಪ ಕಮಕನೂರ, ಕೆಕೆಆರ್ಟಿಸಿ ಅಧ್ಯಕ್ಷ ಅರುಣಕುಮಾರ ಪಾಟೀಲ, ಕುಡಾ ಅಧ್ಯಕ್ಷ ಮಜರ್ ಆಲಂಖಾನ್, ಜೆಸ್ಕಾಂ ಅಧ್ಯಕ್ಷ ಪ್ರವೀಣ್ ಪಾಟೀಲ ಹರವಾಳ, ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಾ.ಕಿರಣ ದೇಶಮುಖ ಸೇರಿದಂತೆ ಮತ್ತಿತರರು ಇದ್ದರು.




















