
ಕಲಬುರಗಿ: ನಗರದ ಎಂಆರ್ಎಂಸಿ ಸ್ಯಾಕ್ ಆವರಣದಲ್ಲಿ ಇಂದು ಆರಂಭಗೊಂಡ ಮೂರುದಿನಗಳ ಕಲ್ಯಾಣ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಂಡಳಿ (ಕೆಕೆಸಿಸಿಐ) ವಜ್ರ ಮಹೋತ್ಸವವನ್ನು ಗೃಹ ಸಚಿವ ಪ್ರಿಯಾಂಕ್ ಖರ್ಗೆ, ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಖಂಡ್ರೆ ಅವರು ಉದ್ಘಾಟಿಸಿದರು.ಮೈಸೂರಿನ ಸುತ್ತೂರು ಮಠದ ಪೂಜ್ಯ ಜಗದ್ಗುರು ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳ ಸಾನಿಧ್ಯದಲ್ಲಿ ನಡೆದ ಸಮಾರಂಭದಲ್ಲಿ ಶಾಸಕರಾದ ಶಶೀಲ ನಮೋಶಿ,ಬಿ.ಜಿ ಪಾಟೀಲ, ಅಲ್ಲಮಪ್ರಭು ಪಾಟೀಲ, ತಿಪ್ಪಣ್ಣಪ್ಪ ಕಮಕನೂರ,ಜಿಲ್ಲಾಧಿಕಾರಿ ಇಕ್ರಂ ಶರೀಫ್,ಕೆಕೆಸಿಸಿಐ ಅಧ್ಯಕ್ಷ ಶರಣಬಸಪ್ಪ ಪಪ್ಪ ಮತ್ತು ಸಂಸ್ಥೆ ಪದಾಧಿಕಾರಿಗಳು ಉಪಸ್ಥಿತರಿದ್ದರು.




















