
ನಗರದ ಗಾಂಧಿನಗರ ವಿಧಾನಸಭಾ ಕ್ಷೇತ್ರದ ಓಕಳಿಪುರಂ ವಾರ್ಡ್‌ನಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ೧೩೫ನೇ ಜಯಂತಿಯೋತ್ಸವವನ್ನು ಅತ್ಯಂತ ಅರ್ಥಪೂರ್ಣವಾಗಿ ಆಚರಿಸಲಾಯಿತು.ಈ ವೇಳೆ ಬಡವರಿಗೆ ಉಚಿತ ದಿನಸಿ ಕಿಟ್ ನ್ನು ಗೃಹ ಸಚಿವರಾದ ಜಿ ಪರಮೇಶ್ವರ್ ವತರಣೆ ಮಾಡಿದರು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗುಂಡೂರಾವ್ ಹಾಗೂ ಮನ್ಸೂರ್ ಅಲಿಖಾನ್ , ಧರ್ಮ ಸೇನಾ, ಬೆಂಗಳೂರು ನಗರ ಎಸ್ಸಿ ಜಿಲ್ಲಾಧ್ಯಕ್ಷರಾದ ಎಪಿಎಸ್ ರಾಜ್ ಕಾರ್ತಿಕ್, ಬ್ಲಾಕ್ ಅಧ್ಯಕ್ಷರಾದ ಸರವಣ ಹಾಗೂ ಮಾಜಿ ಬಿಬಿಎಂಪಿ ಸದಸ್ಯರು, ಬ್ಲಾಕ್ ಅಧ್ಯಕ್ಷರು, ವಾರ್ಡ್ ಅಧ್ಯಕ್ಷರು, ಹಾಗೂ ಅನೇಕ ಕಾಂಗ್ರೆಸ್ ಮುಖಂಡರು ಸ್ಥಳೀಯ ನಿವಾಸಿಗಳು ಉಪಸ್ಥಿತರಿದ್ದರು.





















