Home ಜಿಲ್ಲೆ ಕಲಬುರಗಿ ಕಾಳಸಂತೆಗೆ ಸಾಗುತ್ತಿದ್ದ 140 ಕ್ವಿಂಟಲ್ ಪಡಿತರ ಅಕ್ಕಿ ಜಪ್ತಿ

ಕಾಳಸಂತೆಗೆ ಸಾಗುತ್ತಿದ್ದ 140 ಕ್ವಿಂಟಲ್ ಪಡಿತರ ಅಕ್ಕಿ ಜಪ್ತಿ

ಅಫಜಲಪುರ: ಬಡವರ ಹಸಿವು ನೀಗಿಸಲು ಸರ್ಕಾರದಿಂದ ಹಂಚಿಕೆ ಮಾಡಲಾಗುವ ಪಡಿತರ ಅಕ್ಕಿಯನ್ನು ಕಡಿಮೆ ಬೆಲೆಗೆ ಖರೀದಿಸಿ, ಸಂಗ್ರಹಿಸಿ ಹೆಚ್ಚಿನ ಬೆಲೆಗೆ ಮಾರಾಟ ಮಾಡುವ ಉದ್ದೇಶದಿಂದ ಮಹಾರಾಷ್ಟ್ರದ ಧುದನಿ ಕಡೆಗೆ ಸಾಗಿಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಆಹಾರ ನಿರೀಕ್ಷಕ ಹರಿದಾಸ ಚೋಪಡೆ ಹಾಗೂ ಅಫಜಲಪುರ ಪೆÇಲೀಸರು ಜಂಟಿ ದಾಳಿ ನಡೆಸಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಅಕ್ಕಿಯನ್ನು ವಶಪಡಿಸಿಕೊಂಡಿದ್ದಾರೆ.
ಸರ್ಕಾರ ಬಡ ಮತ್ತು ಅರ್ಹ ಕುಟುಂಬಗಳಿಗೆ ಆಹಾರ ಭದ್ರತೆ ಒದಗಿಸುವ ಉದ್ದೇಶದಿಂದ ಪಡಿತರ ಅಕ್ಕಿಯನ್ನು ವಿತರಿಸುತ್ತಿದೆ. ಆದರೆ, ಬಡವರ ಪಾಲಾಗಬೇಕಾದ ಅಕ್ಕಿಯನ್ನು ಕಡಿಮೆ ಬೆಲೆಗೆ ಖರೀದಿಸಿ, ಲಾಭದ ಉದ್ದೇಶದಿಂದ ಸಂಗ್ರಹಿಸಿ ಬೇರೆಡೆ ಹೆಚ್ಚಿನ ಬೆಲೆಗೆ ಮಾರಾಟ ಮಾಡಲು ಅಕ್ಕಿ ವಾಹನ ಸಾಗಿಸಲಾಗುತ್ತಿದೆ ಎಂಬ ಮಾಹಿತಿ ಅಧಿಕಾರಿಗಳಿಗೆ ಲಭಿಸಿತ್ತು ಎನ್ನಲಾಗಿದೆ.
ಈ ಹಿನ್ನೆಲೆಯಲ್ಲಿ ಕಾರ್ಯಾಚರಣೆ ನಡೆಸಿದ ಆಹಾರ ನಿರೀಕ್ಷಕ ಹರಿದಾಸ ಚೋಪಡೆ ಹಾಗೂ ಅಫಜಲಪುರ ಪೆÇಲೀಸರು ಅಕ್ಕಿಯನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಬಡವರ ಹೊಟ್ಟೆ ತುಂಬಿಸಬೇಕಾದ ಪಡಿತರ ಅಕ್ಕಿ ಅಕ್ರಮ ಲಾಭದ ಸರಕಾಗುತ್ತಿದೆಯೇ? ಎಂಬ ಪ್ರಶ್ನೆ ಇದೀಗ ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.ಬಡವರ ಹಕ್ಕಿನ ಅಕ್ಕಿ ದುರುಪಯೋಗವಾಗದಂತೆ ಸಂಬಂಧಪಟ್ಟ ಆಹಾರ ಇಲಾಖೆ ಹಾಗೂ ಪೆÇಲೀಸ್ ಅಧಿಕಾರಿಗಳು ಕಟ್ಟುನಿಟ್ಟಿನ ನಿಗಾ ವಹಿಸಬೇಕಿದೆ.ಜೇವರ್ಗಿ ತಾಲೂಕಿನಿಂದ ಘತ್ತರಗಾ, ಅಫಜಲಪುರ ಮಾರ್ಗವಾಗಿ ಮಹಾರಾಷ್ಟ್ರ ರಾಜ್ಯಕ್ಕೆ ಅಕ್ರಮ ಅಕ್ಕಿ ಸಾಗಿಸುತ್ತಿರುವ ಕುರಿತು ಮಾಹಿತಿ ಮೇರೆಗೆ ಅಫಜಲಪುರ ತಹಶೀಲ್ದಾರ್ ಸಂಜೀವಕುಮಾರ ದಾಸರ ಆದೇಶದ ಮೇರೆಗೆ ಆಹಾರ ನಿರೀಕ್ಷಕರು ಹಾಗೂ ಪೆÇೀಲಿಸ್ ಇಲಾಖೆಯ ಸಿಬ್ಬಂದಿಗಳು ಜಂಟಿ ಕಾರ್ಯಾಚರಣೆ ನಡೆಸಿ ಮಾದಬಾಳ ತಾಂಡಾ ಹತ್ತಿರ ಟಾಟಾ ಐಚೇರ್ ವಾಹನ ತಡೆದು ಪರಿಶೀಲನೆ ನಡೆಸಿದಾಗ ವಾಹನದಲ್ಲಿ 140 ಕ್ವಿಂಟಲ್ ಅಕ್ಕಿ ಅಂದಾಜು 4.77 ಲಕ್ಷ ರೂ.ಮೌಲ್ಯದ್ದಾಗಿದೆ.ಅಕ್ಕಿಯನ್ನು ಕಾಳಸಂತೆಯಲ್ಲಿ ಮಾರಾಟ ಮಾಡಲು ಮಹಾರಾಷ್ಟ್ರಕ್ಕೆ ಸಾಗಣೆ ಮಾಡಲಾಗುತ್ತಿತ್ತು ಎಂದು ತಿಳಿದು ಬಂದಿದೆ.ಬಸವನ ಬಾಗೇವಾಡಿ ತಾಲೂಕಿನ ಇಂಗಳೇಶ್ವರ ಗ್ರಾಮದ ವಾಹನ ಚಾಲಕ ರಿಯಾಜ್ ಮುಜಾವರ ಮೇಲೆ ಪ್ರಕರಣ ದಾಖಲಾಗಿದೆ.

ಕಾರ್ಯಚರಣೆಯಲ್ಲಿ ಪಿಎಸ್‍ಐ ವಿಜಯ ಕುಮಾರ್ ನಾಯಕ್,ಪೆÇಲೀಸ್ ಸಿಬ್ಬಂದಿಗಳಾದ ಇಮಾಮ್ ಬಾಗವಾನ್ ಕಾಶಿನಾಥ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.ಈ ಕುರಿತು ಅಫಜಲಪುರ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ