
ಕಲಬುರಗಿ:ಮೇ.2: ನಗರದ ಜಗತ್ ವೃತ್ತದಲ್ಲಿರುವ ಡಾ. ಅಂಬೇಡ್ಕರ್ ಮೂರ್ತಿ ಎದುರು ಸಿಐಟಿಯು ಜಿಲ್ಲಾ ಸಮಿತಿ ಹಾಗೂ ಕಾರ್ಮಿಕ ಒಕ್ಕೂಟ ಸಮಿತಿಯ ವತಿಯಿಂದ 140ನೇ ಅಂತಾರಾಷ್ಟ್ರೀಯ ಕಾರ್ಮಿಕ ದಿನಾಚರಣೆಯನ್ನು ಗುರುವಾರ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಸಿಐಟಿಯು ಜಿಲ್ಲಾ ಸಮಿತಿ ಅಧ್ಯಕ್ಷ ಎಂ.ಬಿ. ಸಜ್ಜನ್ ಮಾತನಾಡಿ, ಕಾರ್ಮಿಕರ ಹಕ್ಕುಗಳ ರಕ್ಷಣೆ, ಕನಿಷ್ಠ ವೇತನ ಹೆಚ್ಚಳ ಹಾಗೂ ಕಾರ್ಮಿಕರ ಸಾಮಾಜಿಕ ಭದ್ರತೆಗೆ ಸರ್ಕಾರಗಳು ಹೆಚ್ಚಿನ ಆದ್ಯತೆ ನೀಡಬೇಕು ಎಂದು ಆಗ್ರಹಿಸಿದರು.
ಕಾರ್ಯಕ್ರಮದಲ್ಲಿ ಗೌರಮ್ಮಾ ಪಾಟೀಲ, ನಾಗಯ್ಯಾ ಸ್ವಾಮಿ, ಪದ್ಮಿನಿ ಕಿರಣಗಿ, ಶಾಂತಾ ಘಂಟಿ, ಹುಸೇನ್ ಸೇರಿದಂತೆ ಅನೇಕ ಕಾರ್ಮಿಕ ಮುಖಂಡರು ಹಾಗೂ ಸದಸ್ಯರು ಉಪಸ್ಥಿತರಿದ್ದರು. ಕಾರ್ಮಿಕರ ಏಕತೆ, ಹೋರಾಟ ಮತ್ತು ಸಾಧನೆಗಳನ್ನು ಸ್ಮರಿಸುವ ಮೂಲಕ ಮೇ ದಿನಾಚರಣೆಗೆ ವಿಶೇಷ ಗೌರವ ಸಲ್ಲಿಸಲಾಯಿತು.


























