17ಲಕ್ಷ ಮೌಲ್ಯದ ಮಾದಕ ವಶ: ಇಬ್ಬರ ಬಂಧನ

ಸಂಜೆವಾಣಿ ನ್ಯೂಸ್
ಮೈಸೂರು: ಡಿ.13:-
ನಗರದ ಸಿಸಿಬಿ ಪೆÇಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ 17ಲಕ್ಷ ರೂ. ಮೌಲ್ಯದ ಹೈಡ್ರೋ ಗಾಂಜಾವನ್ನು ವಶಕ್ಕೆ ಪಡೆದು ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.


ನರಸಿಂಹರಾಜ ಪೆÇಲೀಸ್ ಠಾಣೆ ವ್ಯಾಪ್ತಿಯ ನಾಯ್ಡುನಗರದಲ್ಲಿ ಸಿಸಿಬಿ ಪೆÇಲೀಸರು ಮಾಹಿತಿ ಮೇರೆಗೆ ದಾಳಿ ಮಾಡಿ 17ಲಕ್ಷ ರೂ. ಮೌಲ್ಯದ 176ಗ್ರಾಂ. ಹೈಡ್ರೋ ಗಾಂಜಾ ವಶಕ್ಕೆ ಪಡೆದಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಅಫ್ತಾಬ್ ಅಲಿ ಬೇಗ್ ಮತ್ತು ಪ್ರತಾಪ್ ಕುಮಾರ್ ಎಂಬುವರರನ್ನು ಬಂಧಿಸಿದ್ದಾರೆ. ಕಾರ್ಯಾಚರಣೆಗೆ ಸಂಬಂಧಿಸಿದಂತೆ ಎನ್.ಆರ್.ಪೆÇಲೀಸ್ ಠಾಣೆಯಲ್ಲಿ ಎನ್‍ಡಿಪಿಎಸ್ ಕಾಯ್ದೆಯ 1989 ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.