
ಶಿಡ್ಲಘಟ್ಟ, 1-ಮೊದಲ ದಿನದಲ್ಲೇ ಮಕ್ಕಳು ಲವಲವಿಕೆಯಿಂದ ಪರೀಕ್ಷೆ ಬರೆಯಲು ಪ್ರಾರಂಭಿಸಿದ್ದಾರೆ.
ಇಂದಿನಿಂದ ಮಾರ್ಚ್ ೧೮ ರ ವರಿಗೆ ದ್ವಿತೀಯ ಪಿಯುಸಿ ಪರೀಕ್ಷೆ ಸಲಕ ಸಿದ್ದತೆಯಲ್ಲಿದ್ದ ಶಾಲೆಗಳಾದ ಶಿಡ್ಲಘಟ್ಟ ನಗರದ ಸರ್ಕಾರಿ ಪಿಯು ಕಾಲೇಜಿನಲ್ಲಿ ೫೫೧ ಮಕ್ಕಳು ೧೮ ಕೊಠಡಿಗಳಲ್ಲಿ ಪರೀಕ್ಷೆ ಬರೆಲಿದ್ದಾರೆ.
ಹನುಮಂತಪುರ ಗೇಟ್ ಬಳಿಯ ಬಿಜಿಎಸ್ ಪಿಯು ಕಾಲೇಜಿನಲ್ಲಿ ೫೩೩ ಮಕ್ಕಳು ೧೮ ಕೊಠಡಿಗಳಲ್ಲಿ ಪರೀಕ್ಷೆ ಬರೆಯಲಿದ್ದಾರೆ, ತಾಲ್ಲೂಕಿನ ಕಾಚಹಳ್ಳಿ ಗೇಟ್ ಬಳಿಯ ಶ್ರೀ ಸ್ವಾಮಿ ವಿವೇಕಾನಂದ ಪಿಯು ಕಾಲೇಜಿನಲ್ಲಿ ೭೨೧ ಮಕ್ಕಳು ೨೫ ಕೊಠಡಿಗಳಲ್ಲಿ ಆಯೋಜನೆ ಮಾಡಲಾಗಿದ್ದು ಶಿಡ್ಲಘಟ್ಟ ತಾಲೂಕಿನಲ್ಲು ಒಟ್ಟು ಮೂರು ಪರೀಕ್ಷಾ ಕೇಂದ್ರಗಳಲ್ಲಿ ೧೮೦೫ ಮಕ್ಕಳು ತಮ್ಮ ಭವಿಷ್ಯವನ್ನು ಬರೆಯಲಿದ್ದಾರೆ.
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಶಾಲೆಗಳ ಮೇಲೆ ಹದ್ದಿನ ಕಣ್ಣಿಟ್ಟಿದ್ದು ಯಾವುದೇ ಅಕ್ರಮ, ಗೋಂದಲಗಳಿಗೆ ಅವಕಾಶ ನೀಡದೆ ಎಚ್ಚರಿಕೆ ವಹಿಸಿದ್ದಾರೆ. ಎಲ್ಲಾ ಪರೀಕ್ಷಾ ಕೊಠಡಿಗಳಲ್ಲಿ ಮತ್ತು ಹೊರಾಂಗಣದಲ್ಲಿ ಸಿಸಿ ಕ್ಯಾಮರಾ ಅಳವಡಿಸಲಾಗಿದೆ ಮತ್ತು ಸಾಮಾಜಿಕ ಜಾಲಾತಾಣಗಳ ಮೇಲೆ ನಿಗಾ ವಹಿಸುವ ಮೂಲಕ ಪೇಪರ್ ಲೀಕ್ ಆಗದಂತೆ ಕಟ್ಟೆಚ್ಚರ ವಹಿಸಲಾಗಿದೆ ಎಂದು ಸರ್ಕಾರಿ ಪಿಯು ಕಾಲೇಜಿನ ಪರೀಕ್ಷಾ ಉಸ್ತುವಾರಿ ಅಧಿಕಾರಿ ಮುನಿರಾಜು ತಿಳಿಸಿದರು.
ಪಿಯು ಕಾಲೇಜಿನ ಪ್ರಾಂಶುಪಾಲರಾದ ವೆಂಕಟಶಿವಾರೆಡ್ಡಿ, ಬಿ ಜಿ ಎಸ್ ಪಿಯು ಕಾಲೇಜಿನ ಪ್ರಾಂಶುಪಾಲರಾದ ಶಿವಮೂರ್ತಿ ಹಾಗೂ ಕಾಚಹಳ್ಳಿ ಗೇಟ್ ಶ್ರೀ ಸ್ವಾಮಿ ವಿವೇಕಾನಂದ ಕಾಲೇಜಿನ ಪ್ರಾಂಶುಪಾಲರಾದ ಸುರೇಶ್ ಮಾಹಿತಿ ನೀಡಿದರು.
























