ನಾಳೆಯಿಂದ ೨ ದಿನ ರಾಷ್ಟ್ರೀಯ ಮಾರಾಟಗಾರರ ಅಭಿವೃದ್ಧಿ ಕಾರ್ಯಕ್ರಮ

ಬೆಂಗಳೂರು,ಆ.೨೦:ನಾಳೆಯಿಂದ ಎರಡು ದಿನಗಳ ಕಾಲ ರಾಷ್ಟ್ರೀಯ ಮಾರಾಟಗಾರರ ಅಭಿವೃದ್ಧಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಕಾಸಿಯಾ ಅಧ್ಯಕ್ಷ ಬಿ.ಆರ್ ಗಣೇಶ್‌ರಾವ್ ತಿಳಿಸಿದರು.


ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಕಾರ್ಯಕ್ರಮವನ್ನು ವಿಜಯನಗರದ ಕಾಸಿಯಾ ಉದ್ಯೋಗ ಭವನದಲ್ಲಿ ಆಯೋಜಿಸಲಾಗಿದ್ದು, ಕೇಂದ್ರ ಸರ್ಕಾರದ ಸೂಕ್ಷ್ಮ,ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ ಸಚಿವೆ ಶೋಭಾಕರಂದ್ಲಾಜೆ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ ಎಂದರು.


ಎಂಎಸ್‌ಎಂಇಗಳು ಒಂದೇ ವೇದಿಕೆಯಲ್ಲಿ ಸರ್ಕಾರಿ ಇಲಾಖೆಗಳು, ಸಾರ್ವಜನಿಕ ವಲಯದ ಉದ್ಯಮಗಳು, ಬೃಹತ್ ಪ್ರಮಾಣದ ಘಟಕಗಳೊಂದಿಗೆ ಸಂವಹನ ನಡೆಸಲು ಅವಕಾಶ ಹೊಂದಿವೆ ಎಂದರು.


ದುರ್ಬಲ ಎಸ್‌ಎಂಇ ವಲಯಗಳ ಅಭಿವೃದ್ಧಿಯಲ್ಲಿ ಹಣಕಾಸು ಸಂಸ್ಥೆಗಳ ಪಾತ್ರ ನಿರ್ಣಾಯಕವಾಗಿದ್ದು, ಈ ಕಾರ್ಯಕ್ರಮದಲ್ಲಿ ಸಿಡ್ಬಿ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ, ಯುಕೋ ಬ್ಯಾಂಕ್, ಐಡಿಬಿಐ,ಎನ್‌ಎಸ್‌ಐಸಿ, ಜೆಂ ಮತ್ತು ಟ್ರೆಡ್ಸ್ ಸಂಸ್ಥೆಗಳು ಭಾಗವಹಿಸುತ್ತಿವೆ ಎಂದು ಹೇಳಿದರು.