ಸಂಜೆವಾಣಿ ವಾರ್ತೆ
ಕೆ.ಆರ್.ಪೇಟೆ.ಅ.30: ತಾಲ್ಲೂಕಿನ ಸಾರಂಗಿ, ಶ್ಯಾರಹಳ್ಳಿ, ಹೆತ್ತಗೋನಹಳ್ಳಿ ಹಾಗು ಚಂದಗೋನಹಳ್ಳಿ,ಮಂಚಿಬೀಡು ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಸೇತುವೆ ನಿರ್ಮಾಣ ಕಾಮಗಾರಿಗೆ ಶಾಸಕ ಹೆಚ್.ಟಿ ಮಂಜು ಭೂಮಿ ಪೂಜೆ ನೆರವೇರಿಸಿದರು.
ಈ ವೇಳೆ ಮಾತನಾಡಿದ ಅವರು, ಈ ಸೇತುವೆಗಳು ಈ ಭಾಗದ ಜನರ ಬಹುದಿನದ ಬೇಡಿಕೆಯಾಗಿತ್ತು. ಈ ಸೇತುವೆ ನಿರ್ಮಾಣದಿಂದ ಹತ್ತಾರು ಗ್ರಾಮಗಳ ಜನರಿಗೆ, ರೈತರಿಗೆ, ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ. ಕಾಮಗಾರಿಯನ್ನು ಗುಣಮಟ್ಟದಿಂದ ಮಾಡಬೇಕು, ಯಾವುದೇ ಲೋಪ ಬರಬಾರದು ಎಂದು ಗುತ್ತಿಗೆದಾರರಿಗೆ ಖಡಕ್ ಸೂಚನೆ ನೀಡಿದರು.
ತಾಲೂಕಿನ ಅಭಿವೃದ್ಧಿ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಮಾತನಾಡುವವರು ವಾಸ್ತವ ಸ್ಥಿತಿ ಅರಿಯಬೇಕು ಹಿಂದೆ ಜವಾಬ್ದಾರಿಯಲ್ಲಿದ್ದ ಜನಪ್ರತಿನಿಧಿಗಳು ಕೆಲಸ ಮಾಡಿದ್ದರೆ ಅಭಿವೃದ್ಧಿ ಕಾರ್ಯಗಳಿಗೆ ಭೂಮಿಪೂಜೆ ನೆರವೇರಿಸುವ ಅಗತ್ಯವಿರಲಿಲ್ಲ ಎಂದು ಶಾಸಕ ಹೆಚ್.ಟಿ.ಮಂಜು ತಿಳಿಸಿದರು.






















