Home ಜಿಲ್ಲೆ ಮೋದಿ ರಾಜಕೀಯ ಪಯಣದ ೨೫ ವರ್ಷ: ಶಿವಸೇನಾ ವತಿಯಿಂದ ಅನ್ನದಾಸೋಹ

ಮೋದಿ ರಾಜಕೀಯ ಪಯಣದ ೨೫ ವರ್ಷ: ಶಿವಸೇನಾ ವತಿಯಿಂದ ಅನ್ನದಾಸೋಹ

ಬೀದರ್: ಪ್ರಧಾನಿ ನರೇಂದ್ರ ಮೋದಿ ಅವರು ಸಾರ್ವಜನಿಕ ಜೀವನದಲ್ಲಿ ೨೫ ವರ್ಷಗಳ ರಾಜಕೀಯ ಪಯಣ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಶಿವಸೇನಾ ಕರ್ನಾಟಕ ವತಿಯಿಂದ ಹಮ್ಮಿಕೊಂಡಿರುವ ‘ಸಂಭ್ರಮೋತ್ಸವ’ದ ಅಂಗವಾಗಿ ನಗರದಲ್ಲಿ ಬುಧವಾರ ಅನ್ನದಾಸೋಹ ಕಾರ್ಯಕ್ರಮ ನಡೆಯಿತು.
ನಗರದ ಅಂಬೇಡ್ಕರ್ ವೃತ್ತದಲ್ಲಿ ಆಯೋಜಿಸಿದ್ದ ಅನ್ನದಾಸೋಹದಲ್ಲಿ ಸಾರ್ವಜನಿಕರಿಗೆ ಊಟ ವಿತರಿಸಲಾಯಿತು. ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಕಾರ್ಯಕ್ರಮದಲ್ಲಿ ಉತ್ಸಾಹದಿಂದ ಪಾಲ್ಗೊಂಡರು.
ನರೇAದ್ರ ಮೋದಿ ಅವರು ೨೦೦೧ರ ಅ.೭ರಂದು ಗುಜರಾತ್ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸುವ ಮೂಲಕ ಸಕ್ರಿಯ ಆಡಳಿತದ ಹೊಣೆ ಹೊತ್ತರು. ಸುಮಾರು ೧೩ ವರ್ಷಗಳ ಕಾಲ ಗುಜರಾತ್ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ ಅವರು, ೨೦೧೪ರಲ್ಲಿ ದೇಶದ ಪ್ರಧಾನಮಂತ್ರಿಯಾಗಿ ಅಧಿಕಾರ ವಹಿಸಿಕೊಂಡರು. ಬಳಿಕ ೨೦೧೯ ಹಾಗೂ ೨೦೨೪ರ ಲೋಕಸಭಾ ಚುನಾವಣೆಯಲ್ಲಿ ಜನಾದೇಶ ಪಡೆದು ಸತತ ಮೂರನೇ ಅವಧಿಗೆ ಪ್ರಧಾನಿಯಾಗಿ ಮುಂದುವರಿದಿದ್ದಾರೆ.
ಸ್ವಚ್ಛ ಭಾರತ, ಜನಧನ್, ಡಿಜಿಟಲ್ ಇಂಡಿಯಾ, ಮೇಕ್ ಇನ್ ಇಂಡಿಯಾ ಸೇರಿದಂತೆ ವಿವಿಧ ಯೋಜನೆಗಳ ಮೂಲಕ ದೇಶದ ಅಭಿವೃದ್ಧಿ ಹಾಗೂ ಜನಕಲ್ಯಾಣಕ್ಕೆ ಆದ್ಯತೆ ನೀಡಲಾಗಿದೆ ಎಂದು ಆಯೋಜಕರು ಹೇಳಿದರು.
ಶಿವಸೇನಾ ಜಿಲ್ಲಾಧ್ಯಕ್ಷ ಸುಧಾಕರ ಬಿರಾದಾರ ಅವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಹಾನಗರ ಪಾಲಿಕೆ ಸದಸ್ಯ ಹಾಗೂ ಶಿವಸೇನಾ ಮುಖಂಡ ಗೋರಖನಾಥ ಮಡಿವಾಳ ಸೇರಿದಂತೆ ಪಕ್ಷದ ಪ್ರಮುಖರು ಪಾಲ್ಗೊಂಡಿದ್ದರು.
ಈ ಸಂದರ್ಭದಲ್ಲಿ ಅಮೃತ ಪಾಟೀಲ್, ಕೃಷ್ಣಾ ಬಿರಾದಾರ, ಸಿದ್ದು ಸ್ವಾಮಿ, ಸಾಯಿಕುಮಾರ ಸೇರಿದಂತೆ ಶಿವಸೇನಾ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು..