ಕೊರೊನಾಗೆ ರಾಜ್ಯದಲ್ಲಿ 2ನೇ ಬಲಿ

ಸೋಂಕು ತಡೆಗೆ ಕಟ್ಟೆಚ್ಚರ

ಬೆಂಗಳೂರು,ಮೇ.೨೬- ರಾಜ್ಯದಲ್ಲಿ ಕೊರೊನಾ ಸೋಂಕಿನ ಸಕ್ರಿಯ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಕಳೆದ ೨೪ ಗಂಟೆಗಳಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ೪೭ಕ್ಕೆ ಏರಿಕೆ ಯಾಗಿದ್ದು ಓರ್ವ ಮೃತಪಟ್ಟಿದ್ದಾರೆ. ಈ ಮೂಲಕ ಮಹಾಮಾರಿ ಕೊರೊನಾಗೆ ರಾಜ್ಯದಲ್ಲಿ ಎರಡನೇ ಬಲಿಯಾದಂತಾಗಿದ್ದು ಕಟ್ಟೆಚ್ಚರ ವಹಿಸಲಾಗಿದೆ.

ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಕಟ್ಟೆಚ್ಚರ ವಹಿಸುವಂತೆ ಆರೋಗ್ಯ ಇಲಾಖೆ ಕಟ್ಟಿನಿಟ್ಟಿನ ಸೂಚನೆ ನೀಡಿದೆ. ಕೊರೋನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜನರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಿದೆ.

ರಾಜ್ಯದಲ್ಲಿ ಸದ್ಯ ಕರೋನಾ ಸಕ್ರಿಯ ಪ್ರಕರಣ ಸಂಖ್ಯೆ ೪೭ಕ್ಕೆ ಏರಿಕೆಯಾಗಿದೆ. ೪೬ ಮಂದಿ ಹೋಮ್ ಐಸೋಲೇಶನಲ್ಲಿದ್ದು, ಒಬ್ಬರು ಮಾತ್ರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆರೋಗ್ಯ ಇಲಾಖೆ ಕಳೆದ ೨೪ ಗಂಟೆಯಲ್ಲಿ ೧೦೪ ಮಂದಿಯನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಿದ್ದು, ೯ ಹೊಸ ಪ್ರಕರಣ ದಾಖಲಾಗಿವೆ.

ಕಳೆದ ೨೪ ಗಂಟೆಗಳಲ್ಲಿ ಕೊರೊನಾ ಪಾಸಿಟಿವಿ ದರ ಶೇ.೮.೬೫ ನಷ್ಟಿದೆ. ಕೇರಳ ಮತ್ತು ಆಂಧ್ರಪ್ರದೇಶದಲ್ಲೂ ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಏರಿಕೆ ಕಂಡಿವೆ. ರಾಜ್ಯದಲ್ಲಿ ಯಾವುದೇ ಹೊಸ ರೂಪಾಂತರಿ ವೈರಸ್ ಪತ್ತೆಯಾಗಿಲ್ಲ ಎಂದು ಆರೋಗ್ಯ ಇಲಾಖೆ ಸ್ಪಷ್ಟಪಡಿಸಿದೆ.

ಶಾಲಾ ಕಾಲೇಜು ಆರಂಭದ ನಿರ್ಧಾರ

ಕೋವಿಡ್-೧೯ ಪ್ರಕರಣಗಳು ಮತ್ತೆ ವರದಿಯಾಗುತ್ತಿರುವುದರಿಂದ, ರಾಜ್ಯ ಸರ್ಕಾರ ಮೂರರಿಂದ ನಾಲ್ಕು ದಿನಗಳ ನಂತರ ಪರಿಸ್ಥಿತಿ ಪರಿಶೀಲಿಸಿ ಶಾಲೆಗಳು ಮತ್ತು ಕಾಲೇಜುಗಳನ್ನು ಪುನಃ ತೆರೆಯುವ ಬಗ್ಗೆ ನಿರ್ಧರಿಸಲಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಕೊರೊನಾ ಸೋಂಕಿನ ಉಪ-ವರ್ಗ ಅಪಾಯಕಾರಿ ಅಲ್ಲ. ಆದಾಗ್ಯೂ, ಶಾಲೆಗಳು ಮತ್ತು ಕಾಲೇಜುಗಳು ಪುನಃ ತೆರೆಯುತ್ತಿರುವುದರಿಂದ, ಮುಂದಿನ ಮೂರರಿಂದ ನಾಲ್ಕು ದಿನಗಳಲ್ಲಿ ಪರಿಸ್ಥಿತಿಯನ್ನು ಪರಿಶೀಲಿಸಲಾಗುತ್ತದೆ ಮತ್ತು ತೆಗೆದುಕೊಳ್ಳಬೇಕಾದ ಕ್ರಮಗಳನ್ನು ನಿರ್ಧರಿಸಲಾಗುತ್ತದೆ” ಎಂದು ತಿಳಿಸಿದ್ಧಾರೆ

ರಾಜ್ಯದಲ್ಲಿ ಮೇ.೨೯ರಿಂದ ಶಾಲೆಗಳು ಪುನಾರಂಭವಾಗಲಿದ್ದು, ಮಕ್ಕಳ ಹಿತದೃಷ್ಟಿಯಿಂದ ಪರಿಸ್ಥಿತಿ ಪರಿಶೀಲಿಸಿ ಮುಂದಿನ ಕ್ರಮ ಕೈಗೊಳ್ಳಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ತಿಳಿಸಿದ್ದಾರೆ

ಕಳೆದ ೨೪ ಗಂಟೆಗಳಲ್ಲಿ ೯೬ ಆರ್‍ಟಿ-ಪಿಸಿಆರ್ ಸೇರಿದಂತೆ ಒಟ್ಟು ೧೦೪ ಮಾದರಿಗಳನ್ನು ಹೊಸ ಕೊರೊನಾವೈರಸ್‌ಗಾಗಿ ಪರೀಕ್ಷಿಸಲಾಗಿದೆ. ಸೋಂಕಿನ ಪ್ರಮಾಣ ಶೇಡಕಾ ೮.೬೫ ರಷ್ಟುದೆ. ಸಕ್ರಿಯ ಪ್ರಕರಣಗಳಲ್ಲಿ ೪೬ ಮನೆ ಆರೈಕೆಯಲ್ಲಿವೆ ಮತ್ತು ಒಂದು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದೆ ಎಂದು ಇಲಾಖೆ ತಿಳಿಸಿದೆ.

ಈ ವರ್ಷ ರಾಜ್ಯದಲ್ಲಿ ಒಟ್ಟು ೯೮ ಕೋವಿಡ್ -೧೯ ಪ್ರಕರಣಗಳು ವರದಿಯಾಗಿವೆ ಮತ್ತು ೫೦ ರೋಗಿಗಳು ಈಗಾಗಲೇ ಚೇತರಿಸಿಕೊಂಡಿದ್ದಾರೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.