
ಸಂಜೆವಾಣಿ ವಾರ್ತೆ
ಚಾಮರಾಜನಗರ, ಮೇ.29:- ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಚಾಮರಾಜನಗರ ನಗರಸಭೆಯ ನೌಕರರು ನಡೆಸುತ್ತಿರುವ ಅನಿರ್ಧಿμÁ್ಟವಧಿ ಧರಣಿ ಇಂದು 3ನೇ ದಿನಕ್ಕೆ ಕಾಲಿಟ್ಟಿದೆ.
ನಗರಸಭೆಯ ಕಚೇರಿ ಮುಂಭಾಗ ಜಮಾಯಿಸಿದ ಪ್ರತಿಭಟನಾಕಾರರು ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಮಳೆಯನ್ನು ಸಹ ಲೆಕ್ಕಿಸದೇ ಧರಣಿಯಲ್ಲಿ ಭಾಗವಹಿಸಿದ್ದರು.
ನಿನ್ನೆ ನಡೆದ ಧರಣಿಯಲ್ಲಿ ನಗರಸಭೆಯ ಇಂಜಿನಿಯರ್ ಶಿವಶಂಕರ ಆರಾಧ್ಯ ಮಾತನಾಡಿ, ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿಗಳ ಪೌರ ನೌಕರರನ್ನು ರಾಜ್ಯ ಸರ್ಕಾರಿ ನೌಕರರೆಂದು ಪರಿಗಣಿಸಬೇಕು. ನಗದು ರಹಿತ ಆರೋಗ್ಯ ಚಿಕಿತ್ಸಾ ಸೌಲಭ್ಯ ಯೋಜನೆಯಾದ ಜ್ಯೋತಿ ಸಂಜೀವಿನಿಯನ್ನು ಪೌರ ನೌಕರರಿಗೂ ವಿಸ್ತರಿಸಬೇಕು ಸಂಸ್ಥೆಗಳಲ್ಲಿ ಹೊರಗುತ್ತಿಗೆಯಡಿ ಕೆಲಸ ನಿರ್ವಹಿಸುವ ನೌಕರರನ್ನು ಖಾಯಂ ಮಾಡಬೇಕು ಎಂದು ಆಗ್ರಹಿಸಿದರು.
ರಾಜ್ಯದ ನಗರ ಸ್ಥಳೀಯ ನೀರು ಸರಬರಾಜುದಾರರ, ವಾಹನ ಚಾಲಕರು, ಲೋಡರ್‍ಗಳು, ಕ್ಲೀನರ್‍ಗಳು, ಸ್ವಚ್ಛತಾ ಮೇಲ್ವಿಚಾರಕರು, ಉದ್ಯಾನ ನಿರ್ವಹ ಣೆಗಾರರು ಸೇರಿದಂತೆ ವಿವಿಧ ವೃಂದದ ಹೊರಗುತ್ತಿಗೆ ನೌಕರರನ್ನು ನೇರ ಪಾವತಿಗೆ ಒಳಪಡಿಸಬೇಕು ಎಂದು ಒತ್ತಾಯಿಸಿದರು.
ದಿನಗೂಲಿ ಕ್ಷೇಮಾಭಿವೃದ್ಧಿ ಸಮಾನ ಕೆಲಸಕ್ಕೆ ಸಾಮಾನ್ಯ ವೇತನ, ಟೈಮ್ ಸ್ಕೆಲ್ ನೌಕರರ ಖಾಲಿ ಹುದ್ದೆಗಳನ್ನು ಶೀಘ್ರ ಭರ್ತಿ ಮಾಡಬೇಕು. ವಾಹನ ಚಾಲಕರು, ನೀರು ಪೂರೈಕೆ ನೌಕರರು, ನೇರ ಪಾವತಿ ಪೌರ ಕಾರ್ಮಿಕರನ್ನು ಖಾಯಂಗೊಳಿಸಬೇಕು. ವೇತನ ನೀಡಬೇಕು ಎಂದರು.
ಪ್ರತಿಭಟನೆಯಲ್ಲಿ ನಗರಸಭೆ ಅಧಿಕಾರಿಗಳಾದ ವೆಂಕಟನಾಯಕ್, ಜಯನಾಯಕ್, ರೂಪ, ಪುಷ್ಪ, ಸುಶ್ಮಾ, ಮಂಜು, ಪೌರ ಕಾರ್ಮಿಕರ ಸಂಘದ ನಾಗರಾಜು, ಸಿದ್ದಪ್ಪಾಜಿ, ಆರ್‍ಓ ಸ್ವಾಮಿ, ಪಳನಿಸ್ವಾಮಿ ಮೊದಲಾದವರು ಇದ್ದರು.