Home ಮುಖಪುಟ ಸುದ್ದಿ ೩೨.೫೦ ಲಕ್ಷ ನಗದು ಜಪ್ತಿ

೩೨.೫೦ ಲಕ್ಷ ನಗದು ಜಪ್ತಿ

ಬಾಗಲಕೋಟೆ,ಮಾ.೨೨- ಉಪಚುನಾವಣೆ ನೀತಿ ಸಂಹಿತೆ ಉಲ್ಲಂಘಿಸಿ ಹಣ ಸಾಗಿಸುತ್ತಿದ್ದ ವಾಹನ ಅಡ್ಡಗಟ್ಟಿ ೩೨.೫೦ ಲಕ್ಷ ನಗದನ್ನು ಜಪ್ತಿ ಮಾಡಲಾಗಿದೆ.


ದಾಖಲೆ ಇಲ್ಲದೇ ಸಾಗಿಸುತ್ತಿದ್ದ ಹಣವನ್ನು ಹೊನ್ನಾಕಟ್ಟಿ ಚೆಕ್‌ಪೋಸ್ಟ್‌ನಲ್ಲಿ ಜಪ್ತಿ ಮಾಡಲಾಗಿದೆ.ಕೆಎ ೩೬ ಪಿ ೩೯೯೧ ನಂಬರಿನ ಮಾರುತಿ ಎರ್ಟಿಗಾ ಕಾರಿನಲ್ಲಿ ಹಣ ಸಾಗಿಸಲಾಗುತ್ತಿತ್ತು. ಎಸ್‌ಎಸ್‌ಟಿ ತಂಡದಿಂದ ವಾಹನ ತಪಾಸಣೆ ವೇಳೆ ಹಣ ಪತ್ತೆಯಾಗಿದೆ.


ಬಾಗಲಕೋಟೆ ವಿಧಾನಸಭಾ ಕ್ಷೇತ್ರಕ್ಕೆ ಏ.೯ ರಂದು ಉಪಚುನಾವಣೆ ನಡೆಯಲಿದ್ದು, ಬಿಜೆಪಿಯಿಂದ ವೀರಣ್ಣ ಚರಂತಿಮಠ, ಕಾಂಗ್ರೆಸ್‌ನಿಂದ ಮೇಟಿ ಅವರ ಕಿರಿಯ ಪುತ್ರನಿಗೆ ಟಿಕೆಟ್ ಘೋಷಿಸಲಾಗಿದೆ.