ಎಸ್ಸೆಸ್ಸೆಲ್ಸಿ ಪಾಸ್‌ಗೆ ೩೩ ಅಂಕ ಸಾಕು

ಬೆಂಗಳೂರು, ಅ.೧೫- ರಾಜ್ಯದಲ್ಲಿ ಈ ವರ್ಷದಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇಕಡಾ ೩೩ ರಷ್ಟು ಅಂಕ ಪಡೆದರೆ ಉತ್ತೀರ್ಣ ಎಂದು ಘೋಷಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಇದು ೩೫ ಅಂಕ ಪಡೆಯಲು ಪರದಾಡುವ ಅನೇಕ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ.

ರಾಜ್ಯ ಸರ್ಕಾರದ ಹೊಸ ನಿಯಮ ಈ ವರ್ಷದಿಂದಲೇ ಖಾಸಗಿ ಶಾಲೆಗಳಿಗೂ ಇದು ಅನ್ವಯ ಆಗಲಿದೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಪ್ರಸಕ್ತ ವರ್ಷದಿಂದ ಶೇಕಡಾ ೩೩ ರಷ್ಟು ಅಂಕ ಪಡೆದರೆ ಎಸ್‌ಎಸ್‌ಎಲ್‌ಸಿ ಪಾಸ್ ಎಂದು ಘೋಷಿಸಲಾಗುವುದು. ೬೨೫ಕ್ಕೆ ೨೦೬ ಅಂಕ ಪಡೆದರೆ ವಿದ್ಯಾರ್ಥಿಗಳು ಉತ್ತೀರ್ಣ ಆಗಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ಆಂತರಿಕ ಅಂಕ, ಬಾಹ್ಯ ಅಂಕ ಎರಡು ಸೇರಿ ಶೇಕಡಾ ೩೩ ರಷ್ಟು ಅಂಕ ಪಡೆಯಬೇಕಾಗುತ್ತದೆ. ಇದರಿಂದ ಅನೇಕ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ ಎಂದು ಮಾಹಿತಿ ನೀಡಿದ್ದಾರೆ.

ಸುಧಾರಣೆಗೆ ೩ ಪರೀಕ್ಷೆ ವ್ಯವಸ್ಥೆ ಜಾರಿ

ರಾಜ್ಯದಲ್ಲಿ ಪರೀಕ್ಷಾ ವ್ಯವಸ್ಥೆ ಸುಧಾರಣೆಗೆ ಮೂರು ಪರೀಕ್ಷಾ ವ್ಯವಸ್ಥೆ ಜಾರಿ ಮಾಡಲಾಗುವುದು ಎಂದು ಹೇಳಿದ ಅವರು, ಪಾರದರ್ಶಕವಾಗಿ ಇರಲಿ ಎನ್ನುವ ಕಾರಣಕ್ಕೆ ಒತ್ತು ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಪರೀಕ್ಷೆಗಳು ಉತ್ತಮವಾಗಿ ನಡೆಸಲು ವ್ಯವಸ್ಥೆ ಮಾಡಲಾಗಿದೆ. ವಿಶೇಷ ತರಗತಿ ಪಡೆದು ವಿದ್ಯಾರ್ಥಿಗಳನ್ನ ತಯಾರು ಮಾಡಲಾಗಿದೆ.ಹೀಗಾಗಿ ಉತ್ತಮ ಫಲಿತಾಂಶ ಬಂದಿದೆ ಎಂದು ಹೇಳಿದರು.

ಇದೀಗ ಪರೀಕ್ಷಾ ವ್ಯವಸ್ಥೆಯಲ್ಲಿ ಸುಧಾರಣೆ ತರಲು ಶೇಕಡಾ ೩೩ ರಷ್ಟು ಪಾಸಿಂಗ್ ಅಂಕ ನಿಗದಿ ಮಾಡಲಾಗಿದೆ. ೬೨೫ಕ್ಕೆ ೨೦೬ ಅಂಕ ಪಡೆದರೆ ಅಥವಾ ಆಯಾ ವಿಷಯದ ಒಟ್ಟು ಅಂಕಗಳಲ್ಲಿ ೩೦ ಅಂಕ ಪಡೆದಿರಬೇಕು. ಆಂತರಿಕ ಮತ್ತು ಬಾಹ್ಯ ಅಂಕ ಸೇರಿ ಒಟ್ಟು ಶೇಕಡಾ ೩೩ ರಷ್ಟುಅಂಕ ಪಡೆದ ವಿದ್ಯಾರ್ಥಿಯನ್ನು ಉತ್ತೀರ್ಣ ಎಂದು ಘೋಷಿಸಲಾಗುತ್ತದೆ ತಿಳಿಸಿದರು.

೨೦೨೫-೨೬ನೇ ಸಾಲಿನಿಂದ ಈ ನಿಯಮ ಜಾರಿಗೆ ಬರಲಿದೆ. ಈ ವರ್ಷ ಹಾಜರಾಗಿರುವ ಎಲ್ಲಾ ವಿದ್ಯಾರ್ಥಿಗಳು, ರಿಪೀಟರ್ಸ್, ಖಾಸಗಿ ಅಭ್ಯರ್ಥಿಗಳಿಗೂ ಈ ನಿಯಮ ಜಾರಿಯಾಗಲಿದೆ ಎಂದು ಮಾಹಿತಿ ನೀಡಿದ್ದಾರೆ.

  • ಎಸ್ ಎಸ್ ಎಲ್ ಸಿ ಯಲ್ಲಿ ಪಾಸಾಗಲು ಶೇಕಡ ೩೩ ಅಂಕ ಬಂದರೆ ಪಾಸ್
  • ಸರ್ಕಾರಿ ಶಾಲೆಯ ಜೊತೆ ಖಾಸಗಿ ಶಾಲೆಯ ಮಕ್ಕಳಿಗೂ ಅನುಕೂಲ
  • ಈ ವರ್ಷದಿಂಸ ಜಾರಿ , ಶಿಕ್ಷಣ ಸಚಿವ ಮಧುಬಂಗಾರಪ್ಪ ಹೇಳಿಕೆ
  • ೨೦೨೫-೨೬ ನೇ ಸಾಲಿನ ಶೈಕ್ಷಣಿಕ ವರ್ಷದಿಂದ ಹೊಸ ನಿಯಮ ಜಾರಿ
  • ಈ ವರ್ಷ ಹಾಜರಾಗಿರುವ ಎಲ್ಲಾ ವಿದ್ಯಾರ್ಥಿಗಳು, ರಿಪೀಟರ್ಸ್, ಖಾಸಗಿ ಅಭ್ಯರ್ಥಿಗಳಿಗೂ ನಿಯಮ ಜಾರಿ
  • ಸುಧಾರಣೆಗೆ ೩ ಪರೀಕ್ಷೆ ವ್ಯವಸ್ಥೆ ಜಾರಿ
  • ಸಹಸ್ರಾರು ವಿದ್ಯಾರ್ಥಿಗಳಿಗೆ ಅನುಕೂಲ