
ನವಲಗುಂದ,ಜು.೧೨: ಲೋಕ ಅದಾಲತ್ ಮೂಲಕ ೪೩೦ ಪ್ರಕರಣ ಇತ್ಯರ್ಥಗೊಂಡಿವೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರಾದ ಮಂಜುನಾಥ. ಪಿ. ಪಾನಘಂಟಿ ತಿಳಿಸಿದರು.
ಪಟ್ಟಣದ ನ್ಯಾಯಾಲಯದಲ್ಲಿ ನಡೆದ ರಾಷ್ಟಿçÃಯ ಲೋಕ ಅದಾಲತ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಕಕ್ಷಿದಾರರು ತಮ್ಮ ವಿವಾದಗಳನ್ನು ಸೌಹಾರ್ದ ಮತ್ತು ತ್ವರಿತವಾಗಿ ಪರಿಹರಿಸಿಕೊಳ್ಳಲು ಲೋಕ ಅದಾಲತ್ ಸಹಾಯವಾಗಿದೆ ಎಂದರು.
ನ್ಯಾಯಾಲಯದಲ್ಲಿ ವಿಚಾರಣೆಗೆ ಬಾಕಿ ಇರುವ ೮೯೫ ಪ್ರಕರಣಗಳಲ್ಲಿ ೪೩೦ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಲಾಗಿದೆ ಎಂದು ಮಾಹಿತಿ ನೀಡಿದರು.
ರಾಜಿ ಸಂಧಾನದ ಮೂಲಕ ವಿವಾದವನ್ನು ಇತ್ಯರ್ಥಪಡಿಸುವ ಮೂಲಕ ಪ್ರಕರಣಗಳು ಸುಖಾಂತ್ಯಗೊಳ್ಳುವ ಮಾನವ ಸಂಬAಧಗಳನ್ನು ಬೆಸೆಯುವಲ್ಲಿ ಲೋಕ ಅದಾಲಾತ್ ಸಹಕಾರಿಯಾಗಿದೆ. ಆ ಮೂಲಕ ಪ್ರಕರಣವನ್ನು ಇತ್ಯರ್ಥಪಡಿಸಿದ್ದೇ ಆದಲ್ಲಿ ಕಕ್ಷಿದಾರರು ವಿನಾಕಾರಣ ನ್ಯಾಯಾಲಯಕ್ಕೆ ಅಲೆದಾಡುವುದು ತಪ್ಪಲಿದೆ. ಸಮಯ ಮತ್ತು ಹಣ ಉಳಿತಾಯವಾಗಲಿದೆ ಎಂದರು.
ಇAದಿನ ದಿನಗಳಲ್ಲಿ ವ್ಯಾಜ್ಯಗಳು ಸರ್ವೇ ಸಾಮಾನ್ಯ, ಆದರೆ ಕಕ್ಷಿದಾರರು ಆದಷ್ಟು ನ್ಯಾಯಾಲಯಕ್ಕೆ ಬರುವುದನ್ನು ಕಡಿಮೆ ಮಾಡಬೇಕು. ರಾಜಿ ಮಾಡುವ ಮೂಲಕ ಅನೇಕ ಸಮಸ್ಯೆಗಳು, ವ್ಯಾಜ್ಯಗಳನ್ನು ಇತ್ಯರ್ಥ ಪಡಿಸಬಹುದು. ಈ ಉದ್ದೇಶದಿಂದಲೇ ಲೋಕ ಅದಾಲತ್ ಅನ್ನು ನಡೆಸಲಾಗುತ್ತಿದೆ. ಕಕ್ಷಿದಾರರಿಗೆ ಶೀಘ್ರ ನ್ಯಾಯ ಒದಗಿಸಲು ಮತ್ತು ಅವರ ಸಮಯ, ಸಂಬAಧ, ಹಣ ಉಳಿಸಲು ಲೋಕ ಅದಾಲತ್ ನಲ್ಲಿ ರಾಜಿಸೂತ್ರದ ಮೂಲಕ ಪ್ರಕರಣ ಇತ್ಯರ್ಥಪಡಿಸಲಾಗುತ್ತಿದೆ ಎಂದರು.
ನ್ಯಾಯವಾದಿ ಪ್ರಕಾಶ ಅಂಗಡಿ, ನವಲಗುಂದ ತಹಶೀಲ್ದಾರ ಸುಧೀರ ಸಾಹುಕಾರ, ಅಣ್ಣಿಗೇರಿ ತಹಶೀಲ್ದಾರ ಮಂಜುನಾಥ್ ದಾಸಪ್ಪನವರ ಸೇರಿ ನ್ಯಾಯವಾದಿಗಳು, ನ್ಯಾಯಾಲಯ ಸಿಬ್ಬಂದಿಗಳು, ಕಕ್ಷಿದಾರಾರು ಉಪಸ್ಥಿತರಿದ್ದರು































