Home ಕ್ರೈಂ ಸುದ್ದಿಗಳು ಕಟಾವಿಗೆ ಬಂದಿದ್ದ 5 ಎಕರೆ ಕಬ್ಬು ಬೆಂಕಿಗೆ ಆಹುತಿವಿದ್ಯುತ್ ಶಾರ್ಟ್ ಸಕ್ರ್ಯೂಟ್‍ನಿಂದ ಅವಘಡ; ಸೂಕ್ತ ಪರಿಹಾರಕ್ಕೆ...

ಕಟಾವಿಗೆ ಬಂದಿದ್ದ 5 ಎಕರೆ ಕಬ್ಬು ಬೆಂಕಿಗೆ ಆಹುತಿವಿದ್ಯುತ್ ಶಾರ್ಟ್ ಸಕ್ರ್ಯೂಟ್‍ನಿಂದ ಅವಘಡ; ಸೂಕ್ತ ಪರಿಹಾರಕ್ಕೆ ರೈತರ ಆಗ್ರಹ

ವಿಜಯಪುರ, ಅ 29: ಕಟಾವಿಗೆ ಬಂದಿದ್ದ ಐದು ಎಕರೆ ಪ್ರದೇಶದ ಕಬ್ಬಿನ ಬೆಳೆ ವಿದ್ಯುತ್ ಶಾರ್ಟ್ ಸಕ್ರ್ಯೂಟ್‍ನಿಂದ ಬೆಂಕಿಗಾಹುತಿಯಾದ ಘಟನೆ ನಿಡಗುಂದಿ ತಾಲೂಕಿನ ಹೆಬ್ಬಾಳ ಗ್ರಾಮದಲ್ಲಿ ನಡೆದಿದೆ.
ಹೆಬ್ಬಾಳ ಗ್ರಾಮದ ರೈತ ಕಮಲಪ್ಪ ಪಟ್ಟಣಶೆಟ್ಟಿ ಅವರಿಗೆ ಸೇರಿದ ಜಮೀನಿನಲ್ಲಿ ಕಬ್ಬು ಬೆಳೆದಿದ್ದು, ಕಟಾವಿಗೆ ಸಿದ್ಧವಾಗಿತ್ತು. ಬುಧವಾರ ವಿದ್ಯುತ್ ಶಾರ್ಟ್ ಸಕ್ರ್ಯೂಟ್‍ನಿಂದ ಕಬ್ಬಿನ ಗದ್ದೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕ್ಷಣಾರ್ಧದಲ್ಲಿ ಬೆಂಕಿ ಇಡೀ ಜಮೀನಿಗೆ ವ್ಯಾಪಿಸಿದ್ದು, ಕಬ್ಬಿನ ಫಸಲು ಸುಟ್ಟು ಕರಕಲಾಗಿದೆ.
ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸಪಟ್ಟರು. ಆದರೆ ಬೆಂಕಿ ನಂದಿಸುವಷ್ಟರಲ್ಲಿ ಐದು ಎಕರೆ ಜಮೀನಿನಲ್ಲಿದ್ದ ಕಬ್ಬಿನ ಬಹುತೇಕ ಫಸಲು ಸಂಪೂರ್ಣ ಸುಟ್ಟುಹೋಗಿತ್ತು.
ಸಾಲ ಮಾಡಿ ಕಬ್ಬು ಬೆಳೆದಿದ್ದ ರೈತ ಕಮಲಪ್ಪ ಪಟ್ಟಣಶೆಟ್ಟಿ, ಕಟಾವಿನ ಸಂದರ್ಭದಲ್ಲಿ ಬೆಳೆ ಕಳೆದುಕೊಂಡು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಬೆಳೆ ನಷ್ಟದಿಂದ ರೈತನಿಗೆ ಭಾರಿ ಆರ್ಥಿಕ ಹೊರೆ ಉಂಟಾಗಿದೆ.
ಘಟನಾ ಸ್ಥಳಕ್ಕೆ ಹೆಸ್ಕಾಂ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವಿದ್ಯುತ್ ಶಾರ್ಟ್ ಸಕ್ರ್ಯೂಟ್‍ನಿಂದ ಬೆಳೆ ನಷ್ಟವಾಗಿರುವ ಹಿನ್ನೆಲೆಯಲ್ಲಿ ಹೆಸ್ಕಾಂ ವತಿಯಿಂದ ರೈತನಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ರೈತರು ಒತ್ತಾಯಿಸಿದ್ದಾರೆ.