
ಬೀದರ, ಮಾ.18:ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದ ಮೇರೆಗೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಬೀದರ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಮಾರ್ಚ್.14 ರಂದು ನಡೆದ ಬೃಹತ್ ರಾಷ್ಟ್ರೀಯ ಲೋಕ ಅದಾಲತ್‍ನಲ್ಲಿ ಜಿಲ್ಲೆಯಾದ್ಯಾಂತ 66,440 ಪ್ರಕರಣಗಳನ್ನು ಇತ್ಯರ್ಥಗೊಳಿಸಿ 25,15,00,151 ರೂಪಾಯಿಗಳ ಪರಿಹಾರವನ್ನು ಕಕ್ಷಿದಾರರಿಗೆ ಒದಗಿಸಲಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಪ್ರಕಾಶ ಬನಸೋಡೆ ತಿಳಿಸಿದರು.
ಅವರು ಮಂಗಳವಾರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಭಾಂಗಣದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
ಈ ಬಾರಿಯ ಲೋಕ ಅದಾಲತನಲ್ಲಿ ಒಟ್ಟು 11,869 (ಪೆಂಡಿಂಗನಲ್ಲಿನ) ಪ್ರಕರಣಗಳನ್ನು ಇತ್ಯರ್ಥಗೊಳಿಸಲಾಗಿದ್ದು, 13,16,90,209 ರೂ. ಹಣವನ್ನು ಕಕ್ಷಿದಾರರಿಗೆ ವಸೂಲಾತಿ ಮತ್ತು ಪರಿಹಾರ ಒದಗಿಸಲಾಗಿದೆ. ಜಿಲ್ಲೆಯಾದ್ಯಾಂತ ಒಟ್ಟು 54,571 ವ್ಯಾಜ್ಯಪೂರ್ವ ಪ್ರಕರಣಗಳನ್ನು ಇತ್ಯರ್ಥಗೊಳಿಸಲಾಗಿದ್ದು ಹಾಗೂ ಕಕ್ಷಿದಾರರಿಗೆ 11,98,09,942 ರೂ. ಹಣವನ್ನು ವಸೂಲಾತಿ ಮತ್ತು ಪರಿಹಾರ ಒದಗಿಸಲಾಗಿದೆ ಎಂದು ತಿಳಿಸಿದರು.
ಜಿಲ್ಲೆಯಾಧ್ಯಾಂತ ಈ ಲೋಕ ಆದಾಲತನಲ್ಲಿ ವೈವಾಹಿಕ ವ್ಯಾಜ್ಯವನ್ನು ಇತ್ಯರ್ಥಪಡಿಸಿ ಸಂದಾನದ ಮೂಲಕ 05 ಜೋಡಿ ದಂಪತಿಯನ್ನು ರಾಜಿ ಸಂಧಾನದ ಮೂಲಕ ಒಂದು ಮಾಡಲಾಗಿದೆ ಹಾಗೂ ನ್ಯಾಯಲಯಗಳಲ್ಲಿ ಬಾಕಿ ಇರುವ ಒಟ್ಟು 23 ಹಳೆಯ ಪ್ರಕರಣ ಹಾಗೂ 12 ಹಿರಿಯ ನಾಗರಿಕರ ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಬೀದರನ ಸಿ.ಜೆ.ಎಂ. ರಾಘವೇಂದ್ರ ಉಪಾಧ್ಯೆ ಸೇರಿದಂತೆ ಪ್ರಾಧಿಕಾರದ ಸಿಬ್ಬಂದಿಗಳು ಉಪಸ್ಥಿತರಿದ್ದರು.

























