ಕಲಬುರಗಿ,ನ.3-ಲಿಟಲ್ ಲ್ಯಾಂಪ್ಸ್ ಪ್ರಿ ಸ್ಕೂಲಲ್ಲಿ 70ನೇ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು. ಸಂಸ್ಥೆಯ ಅಧ್ಯಕ್ಷೆ ರಾಜೇಶ್ವರಿ ಎನ್. ಮುಲಗೆ ಕನ್ನಡಾಂಬೆ ಭಾವಚಿತ್ರಕ್ಕೆ ಪುಷ್ಪಾರ್ಚನೆ ಹಾಗೂ ಪೂಜೆಯನ್ನು ನೆರವೇರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ನಮ್ಮ ಕನ್ನಡ ನಾಡು ಶ್ರೇಷ್ಠ ಸಂಸ್ಕøತಿ ಮತ್ತು ಪರಂಪರೆಯನ್ನು ಹೊಂದಿದೆ. ಈ ನಾಡನ್ನು ಮತ್ತು ಕನ್ನಡ ಭಾಷೆಯನ್ನು ಉಳಿಸಿ ಬೆಳೆಸಬೇಕಾಗಿದೆ. ಎಲ್ಲರೂ ಕನ್ನಡವನ್ನು ಹೆಚ್ಚೆಚ್ಚು ಬಳಕೆ ಮಾಡಿ ಅದರ ಅಸ್ತಿತ್ವವನ್ನು ಕಾಪಾಡಬೇಕಾಗಿದೆ ಎಂದು ಕರೆ ನೀಡಿದರು.
ನಂತರ ಶಾಲಾ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಈ ಸಂದರ್ಭದಲ್ಲಿ ಶಾಲೆಯ ಶಿಕ್ಷಕಿ ಶಾರದಾ ಮುಗಳಿ, ಆರತಿ, ಸಿಬ್ಬಂದಿಯವರಾದ ಪ್ರಭಾವತಿ ಭಾಗವಹಿಸಿದ್ದರು.


























