
ಕಲಬುರಗಿ,ಏ.13-ಆಳಂದ ಉಪ ವಿಭಾಗದ ವ್ಯಾಪ್ತಿಯಲ್ಲಿ ಬರುವ 7 ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಕಳವಾದ ಮೊಬೈಲ್‍ಗಳನ್ನು ಸಿಇಐಆರ್ ಪೋರ್ಟಲ್ ಮೂಲಕ ಪತ್ತೆ ಹಚ್ಚಿ ಅವುಗಳನ್ನು ಅವುಗಳ ವಾರುಸುದಾರಿಗೆ ಒಪ್ಪಿಸಲಾಗಿದೆ ಎಂದು ಎಸ್‍ಪಿ ಅಡ್ಡೂರು ಶ್ರೀನಿವಾಸಲು ತಿಳಿಸಿದರು.
ನಗರದ ಪೊಲೀಸ್ ಭವನದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಳಂದ ಉಪ ವಿಭಾಗದಲ್ಲಿ ಬರುವ 7 ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಕಳವಾದ 13.77 ಲಕ್ಷ ರೂ.ಮೌಲ್ಯದ 71 ಮೊಬೈಲ್‍ಗಳನ್ನು ಪತ್ತೆ ಹಚ್ಚಿ ಅವುಗಳನ್ನು ಅವುಗಳ ವಾರಸುದಾರರಿಗೆ ಒಪ್ಪಿಸಲಾಗಿದೆ ಎಂದು ತಿಳಿಸಿದರು.
ಹೆಚ್ಚುವರಿ ಎಸ್‍ಪಿ ಮಹೇಶ ಮೇಘಣ್ಣನವರ್ ಸೇರಿದಂತೆ ಆಳಂದ ಉಪ ವಿಭಾಗದ ಪೊಲೀಸ್ ಅಧಿಕಾರಿಗಳು ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.


















