
ಚಿತ್ತಾಪುರ :ಜ.೨೬:ಪಟ್ಟಣದ ಪ್ರಜಾಸೌಧದ ಆವರಣದಲ್ಲಿ ತಾಲೂಕು ಆಡಳಿತದ ವತಿಯಿಂದ ೭೭ನೇ ಗಣರಾಜ್ಯೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ಇದೇ ವೆಳೆ ತಹಶೀಲ್ದಾರ್ ನಾಗಯ್ಯ ಹಿರೇಮಠ ಅವರು ಮಹಾತ್ಮ ಗಾಂಧೀಜಿ ಹಾಗೂ ಡಾ.ಬಿ.ಆರ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಧ್ವಜಾರೋಹಣ ನೆರವೇರಿಸಿದರು.
ಈ ಸಂದರ್ಭದಲ್ಲಿ ತಾಪಂ ಇಓ ಮಹ್ಮದ್ ಅಕ್ರಂ ಪಾಶಾ, ಗ್ರೇಡ್-೨ ತಹಶೀಲ್ದಾರ್ ರಾಜಕುಮಾರ ಮರತೂರಕರ್, ಪಿಎಸ್’ಐ ಮಂಜುನಾಥ ರೆಡ್ಡಿ, ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಬಸವರಾಜ ಬಳೂಂಡಗಿ, ನಾಗರೆಡ್ಡಿ ಗೋಪಸೇನ್ ಸೇರಿದಂತೆ ತಾಲೂಕು ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು, ಅನೇಕ ಮುಖಂಡರು, ಶಿಕ್ಷಕರು ಸೇರಿದಂತೆ ವಿದ್ಯಾರ್ಥಿಗಳು ಇದ್ದರು.

























