
ಬೀದರ್ :ಜ.೨೭:ನಗರದ ನಂದಿ ಕಾಲೋನಿಯಲ್ಲಿರುವ ಜಿಲ್ಲಾ ಜನತಾದಳ (ಜಾತ್ಯತೀತ) ಕಚೇರಿಯಲ್ಲಿ ೭೭ನೇ ಗಣರಾಜ್ಯೋತ್ಸವವನ್ನು ಭಕ್ತಿ, ಗೌರವ ಮತ್ತು ದೇಶಪ್ರೇಮದೊಂದಿಗೆ ಆಚರಿಸಲಾಯಿತು.
ಪಕ್ಷದ ಜಿಲ್ಲಾ ಅಧ್ಯಕ್ಷ ರಮೇಶ್ ಪಾಟೀಲ ಸೋಲಾಪುರ ಅವರು ರಾಷ್ಟ್ರಧ್ವಜವನ್ನು ಹಾರಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಭಾರತದ ಸಂವಿಧಾನವು ಜಗತ್ತಿನಲ್ಲಿಯೇ ಶ್ರೇಷ್ಠವಾದುದು ಎಂದು ಬಣ್ಣಿಸಿ, ರೈತರು, ಕಾರ್ಮಿಕರು ಹಾಗೂ ಸಾಮಾನ್ಯ ಜನರ ಹಿತ ರಕ್ಷಣೆಗೆ ಜೆಡಿಎಸ್ ಪಕ್ಷವು ಸಂವಿಧಾನಬದ್ಧವಾಗಿ ಹೋರಾಟ ನಡೆಸಿಕೊಂಡು ಬಂದಿದೆ ಎಂದು ತಿಳಿಸಿದರು. ಸಂವಿಧಾನದ ಆಶಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವಂತೆ ಕಾರ್ಯಕರ್ತರಿಗೆ ಶಪಥ ಬೋಧಿಸಲಾಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಶೋಕ ಕೋಡಗೆ, ಜಿಲ್ಲಾ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸಜ್ಜದ ಸಾಹೇಬ, ಜಿಲ್ಲಾ ಪರಿಶಿಷ್ಟ ಘಟಕದ ಅಧ್ಯಕ್ಷ ದೇವೇಂದ್ರಕುಮಾರ ಸೋನಿ, ರಾಜ್ಯ ಕಾರ್ಯದರ್ಶಿ ರಾಜಶೇಖರ ಜವಳೆ, ನಗರಸಭೆ ಸದಸ್ಯ ರಾಜು ಚಿಂತಾಮಣಿ, ಸಂಗಮೇಶ ಚಿದ್ರಿ, ಜಿಲ್ಲಾ ಕಾರ್ಯದರ್ಶಿ ಶಿವಪುತ್ರ ಮಾಳ್ಗೆ, ಮಹಿಳಾ ಘಟಕದ ಅಧ್ಯಕ್ಷೆ ಲಲಿತಾ ಕರಂಜಿ, ಮಹಿಳಾ ಕಾರ್ಯದರ್ಶಿ ಶ್ರೀಮತಿ ಶಾಂತಮ್ಮಾ ಕರಕನಳ್ಳಿ, ರಾಜ್ಯ ಮುಖಂಡರಾದ ಮೊಹ್ಮದ ಅಸದೊದ್ದಿನ, ಬೀದರ ದಕ್ಷಿಣ ಕ್ಷೇತ್ರದ ರೇವಣಸಿದ್ದಪ್ಪಾ ಸಿರಕಟನಳ್ಳಿ.ವಿನಯಕುಮಾರ ಎ.ಜಿ, ಮೊಹ್ಮದ ಸಲೀಮ ಅಮಲಾಪೂರ ಸೇರಿದಂತೆ ಪಕ್ಷದ ವಿವಿಧ ಹುದ್ದೆಗಳ ಪದಾಧಿಕಾರಿಗಳು, ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.






















