
ಯಾದಗಿರಿ: ಜೂ:೫: ರಾಜ್ಯ ಸರ್ಕಾರದ ಪಂಚ್ ಗ್ಯಾರಂಟಿ ಯೋಜನೆಗಳಡಿ ಜಿಲ್ಲೆಯಲ್ಲಿ ಶೇ ೯೬.೦೫ ರಷ್ಟು ಫಲಪ್ರದವಾಗಿ ಜಾರಿಯಾಗಿವೆ ಎಂದು ರಾಜ್ಯ ಸರ್ಕಾರ ಪಂಚ್ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಉಪಾಧ್ಯಕ್ಷರಾದ ಮೈರೋಜ್ ಖಾನ್ ತಿಳಿಸಿದ್ದಾರೆ.
ಬುಧವಾರ ಸಂಜೆ ಇಲ್ಲಿನ ಜಿಪಂ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಎಲ್ಲ ಮಾಹಿತಿ ಪಡೆದು ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಎಲ್ಲ ಯೋಜನೆಗಳು ಸಂಬAಧಪಟ್ಟ ಇಲಾಖೆ ಅಧಿಕಾರಿಗಳು ಸರಿಯಾದ ರೀತಿಯಲ್ಲಿ ನಿರ್ವಹಣೆ ಮಾಡುತ್ತಿದ್ದಾರೆ. ಜಿಲ್ಲಾ ಸಮಿತಿ ಅಧ್ಯಕ್ಷರ,ಪದಾಧಿಕಾರಿಗಳು, ಡಿಸಿ, ಜಿಪಂ ಸಿಇಒ ಅವರ ಮಾಸಿಕ ಸಭೆ ನಡೆಸಿ ಪರಿಶೀಲನೆ ಕೂಡಾ ಮಾಡುತ್ತಿದ್ದಾರೆ. ಹೀಗಾಗಿ ಜಿಲ್ಲೆಯಲ್ಲಿ ಯಶಸ್ವಿಯಾಗಿ ಯೋಜನೆಗಳು ಕಾರ್ಯಗತವಾಗುತ್ತಿವೆ ಎಂದು ಅವರು ಹೇಳಿದರು.
ಯುವನಿಧಿ ಯೋಜನೆಯಡಿ ಸೌಲಭ್ಯ ಕಲ್ಪಿಸಲು ಇನ್ನಷ್ಟು ಗಟ್ಟಿಯಾಗಿ ಕೆಲಸ ಮಾಡಬೇಕಿದೆ. ಇದು ಪೂರ್ಣಪ್ರಮಾಣದಲ್ಲಿ ಯಶಸ್ಸಿಯಾಗಲು ಸಂಬAಧಪಟ್ಟ ಅಧಿಕಾರಿಗಳು ಅರ್ಹ ಪದವಿ ಪಡೆದ ಯುವಕರಿಗೆ ತಿಳಿಹೇಳಿ ನೊಂದಣಿ ಮಾಡಿಕೊಳ್ಳಲು ತಿಳಿಸಲಾಗಿದೆ.
ಪದವಿ ಪಡೆದ ಯುವಕರಿಗೆ ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ಕೌಶಲ್ಯ ತರಬೇತಿ ನೀಡುವ ಮೂಲಕ ಅವರಿಗೆ ಕೆಲಸದ ಭದ್ರತೆಗೆ ಅನುಕೂಲ ಮಾಡಿಕೊಡಲಾಗುವುದೆಂದರು.
ಜಿಲ್ಲಾ ಸಮಿತಿ ಅಧ್ಯಕ್ಷ ಶ್ರೇಣಿಕುಮಾರ ದೋಖಾ, ಉಪಾಧ್ಯಕ್ಷ ಬಸ್ಸು ಗೌಡ ಬಿಳ್ಹಾರ, ಡಿಸಿ ಡಾ.ಸುಶೀಲಾ, ಜಿಪಂ ಸಿಇಒ ಲವೀಶ್ ಒರಡಿಯಾ ಸೇರಿದಂತೆಯೇ ಸದಸ್ಯರು,ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.