
ಸಂಜೆವಾಣಿ ವಾರ್ತೆ
ಚಾಮರಾಜನಗರ, ಜೂ.02-ಸಮಾಜಕ್ಕೆ ಉತ್ತಮ ನಾಗರಿಕರನ್ನು ನೀಡುವ ಶಿಕ್ಷಕರ ಪಾತ್ರ ತುಂಬಾ ಮಹತ್ತರವಾಗಿದೆ ಎಂದು ಚಾಮರಾಜನಗರ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಹನುಮಶೆಟ್ಟಿ ತಿಳಿಸಿದರು.
ನಗರದ ಚೆನ್ನೀಪುರದ ಮೋಳೆ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಡಾ.ಎಸ್.ಪಿ. ಬಾಲಸುಬ್ರಮಣ್ಯಂ ಗಾನಗಂಧರ್ವ ಸಾಂಸ್ಕøತಿಕ ಕಲಾ ವೇದಿಕೆ ಸಂಯುಕ್ತಾಶ್ರಯದಲ್ಲಿ ನಡೆದ ದೈಹಿಕ ಶಿಕ್ಷಕ ಜೋಸೆಫ್. ಎನ್ ಅವರಿಗೆ ನೀಡಿದ ಬೀಳ್ಕೊಡುಗೆ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ ಅವರು ವಿದ್ಯಾರ್ಥಿಗಳಿಗೆ ಶಿಕ್ಷಣದμÉ್ಟೀ ಮಹತ್ವವನ್ನು ಕ್ರೀಡೆಗೂ ನೀಡಬೇಕು ಈ ನಿಟ್ಟಿನಲ್ಲಿ ದೈಹಿಕ ಶಿಕ್ಷಕ ಜೋಸೆಫ್.ಎನ್ ಅವರು ಶಾಲೆಯ ವಿದ್ಯಾರ್ಥಿಗಳಿಗೆ ವಿವಿಧ ಕ್ರೀಡಾ ಚಟುವಟಿಕೆಗಳಲ್ಲಿ ಉತ್ತಮ ತರಬೇತಿ ನೀಡಿದ್ದಾರೆ. ಅಲ್ಲದೆ ಶಾಲೆಯ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಿದ್ದಾರೆ. ಚೆನ್ನಿಪುರದ ಮೋಳೆ ಬಡಾವಣೆಯಲ್ಲಿ ಹಿಂದುಳಿದ ಉಪ್ಪಾರ ಸಮುದಾಯದ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ವ್ಯಾಸಂಗ ಮಾಡುತ್ತಿದ್ದು, ಈ ಶಾಲೆಗೆ ಬೇಕಾದ ಸಲಕರಣೆಗಳನ್ನು ಕೆಲವು ದಾನಿಗಳಿಂದ ಕೊಡುಗೆಯಾಗಿ ನೀಡಿದ್ದಾರೆ. ಜೋಸೆಫ್ ಅವರು ಸುಮಾರು 30 ವರ್ಷಗಳ ಕಾಲ ಸುಧೀರ್ಘ ಸೇವೆ ಸಲ್ಲಿಸಿ ನಿವೃತ್ತಿಯಾಗಿದ್ದಾರೆ. ಅವರ ನಿವೃತ್ತಿಯ ಜೀವನ ಸುಖಕರವಾಗಿರಲಿ ಎಂದು ಶುಭ ಹಾರೈಸಿದರು.
ಇದೇ ಸಂದರ್ಭದಲ್ಲಿ ಶಾಲೆಯ ಮುಖ್ಯ ಶಿಕ್ಷಕರ ತಂಡ ಹಾಗೂ ವಿವಿಧ ಸಂಘ ಸಂಸ್ಥೆಗಳಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದ ಜೋಸೆಫ್ ಅವರು ತಮ್ಮ ಕರ್ತವ್ಯದ ವೇಳೆ ಶಿಕ್ಷಕರು ಹಾಗೂ ಪೆÇೀಷಕರು ಸಂಪೂರ್ಣ ಸಹಕಾರ ನೀಡಿದ್ದಾರೆ, ಹೀಗಾಗಿ ಎಲ್ಲರಿಗೂ ಕೃತಜ್ಞತೆ ಸಲ್ಲಿಸುವುದಾಗಿ ತಿಳಿಸಿದರು.ಇದೆ ವೇಳೆ ಜೋಸೆಫ್ ಹಾಗೂ ಅವರ ಪತ್ನಿ ಸುಶೀಲ ಅವರಿಗೆ ಎಸ್.ಪಿ.ಬಿ ಕಲಾ ವೇದಿಕೆ ವತಿಯಿಂದ ಪುಷ್ಪವೃಷ್ಠಿ ಮಾಡಲಾಯಿತು.ಇದೆ ವೇಳೆ ಅವರ ನೆನಪಿಗಾಗಿ ಶಾಲಾ ಆವರಣದಲ್ಲಿ ಗಿಡಗಳನ್ನು ನೀಡಲಾಯಿತು.
ಈ ಸಂದರ್ಭದಲ್ಲಿ ಬಿ.ಆರ್.ಸಿ ರಾಜೀವ್, ಬಿ.ಆರ್.ಪಿ. ರಮೇಶ್, ಎಸ್.ಡಿ.ಎಂ.ಸಿ ಅಧ್ಯಕ್ಷ ಮಹದೇವು, ಮುಖ್ಯ ಶಿಕ್ಷಕ ಬಸವಣ್ಣ.ಎಸ್, ಎಸ್.ಪಿ.ಬಿ ಸಂಘದ ಜಿಲ್ಲಾ ಅಧ್ಯಕ್ಷ ಎಚ್.ಎಂ. ಶಿವಣ್ಣ ಮಂಗಲ ಹೊಸೂರು, ದೈಹಿಕ ಶಿಕ್ಷಣಾಧಿಕಾರಿಗಳಾದ ಶಂಕರ್, ಬಸವರಾಜು, ಶಿಕ್ಷಕ ರೆಬೆಲೊ, ದಲಿತ ಮಹಾಸಭಾ ರಾಜ್ಯ ಉಪಾಧ್ಯಕ್ಷ ವೆಂಕಟರಮಣಸ್ವಾಮಿ (ಪಾಪು), ಮುಖಂಡರಾದ ಕೂಡ್ಲೂರು ಶ್ರೀಧರ್ ಮೂರ್ತಿ, ಎಲ್.ಸುರೇಶ್, ಎಸ್.ಪಿ.ಬಿ. ಸಂಘದ ಸದಸ್ಯರಾದ ಬಂಗಾರು, ವಸಂತ, ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳು ಸೇರಿದಂತೆ ಇತರರು ಇದ್ದರು.