ಮಕ್ಕಳಲ್ಲಿ ಕಾರ್ಮಿಕ ಸಮಸ್ಯೆಯ ಅರಿವು ಹೆಚ್ಚಿಸಿ, ಉತ್ತಮ ಭವಿಷ್ಯ ನಿರ್ಮಿಸಿ

ಕಲಬುರಗಿ:ಜೂ.13:ನಗರದ ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ, ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಕಾಲೇಜಿನಲ್ಲಿ ವಿಶ್ವ ಬಾಲ ಕಾರ್ಮಿಕ ವಿರೋಧಿ ದಿನದ ಅಂಗವಾಗಿ ಕಾಲೇಜಿನ ಎಲ್ಲಾ ವಿದ್ಯಾರ್ಥಿನಿಯರಿಗೆ ವಿಶ್ವ ಬಾಲ ಕಾರ್ಮಿಕ ವಿರೋಧಿ ದಿನದ ಮಹತ್ವ ಮತ್ತು ಉದೇಶಗಳ ಕುರಿತಾಗಿ ಮಾಹಿತಿಯನ್ನು ನೀಡಿ ಪ್ರತಿಜ್ಞಾ ವಿಧಿಯನ್ನು ಬೋಧಿಸಲಾಯಿತು. ಈ ಸಂದರ್ಭದಲ್ಲಿ ರಾಜ್ಯಶಾಸ್ತ್ರದ ಉಪನ್ಯಾಸಕರಾದ ಡಾ. ನಯನತಾರಾ ಆಸ್ಪಲ್ಲಿ ಅವರು ವಿದ್ಯಾರ್ಥಿನಿಯರನ್ನು ಉದ್ದೇಶಿಸ ಮಾತನಾಡುತ್ತಾ ವಿಶ್ವ ಬಾಲ ಕಾರ್ಮಿಕ ವಿರೋಧಿ ದಿನದ ಪ್ರಮುಖ ಉದ್ದೇಶವೆಂದರೆ ಮಕ್ಕಳನ್ನು ಯಾವುದೇ ರೀತಿಯ ಕಾರ್ಮಿಕ ಕೆಲಸದಿಂದ ರಕ್ಷಿಸುವುದು ಮತ್ತು ಅವರಿಗೆ ಶಿಕ್ಷಣ, ಆಟ ಮತ್ತು ಉಚಿತ ಬಾಲ್ಯವನ್ನು ಒದಗಿಸುವ ಬಗ್ಗೆ ಜಾಗೃತಿ ಮೂಡಿಸುವುದು ಮತ್ತು ಈ ದಿನ ಸಮಾಜದಲ್ಲಿ ಮಕ್ಕಳ ಕಾರ್ಮಿಕ ಸಮಸ್ಯೆಯ ಅರಿವು ಹೆಚ್ಚಿಸಿ, ಅವರನ್ನು ಶಿಕ್ಷಣ, ಆರೈಕೆ ಮತ್ತು ಪ್ರೀತಿ ನೀಡುವ ಮೂಲಕ ಉತ್ತಮ ಭವಿಷ್ಯ ನಿರ್ಮಿಸಲು ನಮ್ಮೆಲ್ಲರನ್ನೂ ಪ್ರೇರೇಪಿಸುತ್ತದೆ ಎಂದು ಮಾತನಾಡಿದರು.
ಕನ್ನಡ ಉಪನ್ಯಾಸಕರಾದ ಶ್ರೀ ಬಸವರಾಜ ಗೋಣಿ ಸರ್ ಅವರು ಎಲ್ಲಾ ವಿದ್ಯಾರ್ಥಿನಿಯರಿಗೆ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು. ಈ ಸಂದರ್ಭದಲ್ಲಿ ವಿದ್ಯಾರ್ಥಿ ಸಂಘದ ಸಲಹೆಗಾರರಾದ ಶ್ರೀಮತಿ ಶೈಲಜಾ ನಾಕೇದಾರ, ಉಪನ್ಯಾಸಕರಾದ ಶ್ರೀಮತಿ ರಶ್ಮಿ ಸ್ವಾಮಿ, ಶ್ರೀಮತಿ ಅನೀತಾ ಪಾಟೀಲ, ಶ್ರೀಮತಿ ಮಹಾನಂದಾ ಗೊಬ್ಬುರ, ಶ್ರೀಮತಿ ಜಗದೇವಿ ಚಿಕ್ಕೆಗೌಡ ಮತ್ತು ಪ್ರಥಮ ಮತ್ತು ದ್ವಿತೀಯ ವರ್ಷದ ವಿದ್ಯಾರ್ಥಿನಿಯರೆಲ್ಲರು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು ಎಂದು ಕಾಲೇಜಿನ ಪ್ರಾಚಾರ್ಯರಾದ ಡಾ. ಮೋಹನರಾಜ ಪತ್ತಾರ ಅವರು ತಿಳಿಸಿದ್ದಾರೆ.