ಹಳೇ ಹುಬ್ಬಳ್ಳಿ ನ್ಯೂ ಇಂಗ್ಲಿಷ್ ಶಾಲೆ ಹತ್ತಿರ ಪಶು ಆಸ್ಪತ್ರೆಗೆ ನೂತನ ಕಟ್ಟಡ ನಿರ್ಮಾಣ ಕಾಮಗಾರಿಯನ್ನು ಎಸ್ಸಿಎಸ್ಪಿ/ಟಿಎಸ್ಪಿ ಮಿಶ್ರ ತಳಿ ಹಸು ಘಟಕ ಸ್ಥಾಪನೆ ಫಲಾನುಭವಿಗಳ ಆಯ್ಕೆ ಹಾಗೂ ಮೇಲ್ವಿಚಾರಣೆ ಸಮಿತಿ ಕರ್ನಾಟಕ ಸರ್ಕಾರದ ನಾಮನಿರ್ದೇಶನ ಸದಸ್ಯ ಸಾದಿಕ್ ಖಾನ ಹಕಿಮ ಅವರು ಪರಿಶೀಲನೆ ನಡೆಸಿ ಕಟ್ಟಡ ಕಾಮಗಾರಿ ಕಾರ್ಯವನ್ನು ಚುರುಕುಗೊಳಿಸಲು ಸೂಚನೆ ನೀಡಿದರು.ಈ ಸಂದರ್ಭದಲ್ಲಿ ಇತರೆ ನಾಮನಿರ್ದೇಶನ ಸದಸ್ಯರಾದ ಜಂಪನಗೌಡ್ರ ಪಾಟೀಲ ಹಾಗೂ ಮುಖ್ಯ ವೈದ್ಯಾಧಿಕಾರಿ ಡಾ. ರಾಮಚಂದ್ರ ಹೊಸಮನಿ ಪಶು ಆಸ್ಪತ್ರೆಯ ಸಿಬ್ಬಂದಿ ಉಪಸ್ಥಿತರಿದ್ದರು.